ಗೌರಿ- ಗಣೇಶ ಹಬ್ಬ ಆಚರಣೆಗೆ ಭರದ ಸಿದ್ಧತೆ: ಎಲ್ಲೆಡೆ ಖರೀದಿ ಭರಾಟೆ
ನಾಳೆ ನಡೆಯುವ ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲೆಡೆ ಖರೀದಿ ಹಾಗೂ ಭರದ ಸಿದ್ಧತೆಗಳು ನಡೆಯುತ್ತಿವೆ.ರಾಜಧಾನಿ ಪ್ರಮುಖ ಮಾರುಕಟ್ಟೆಗಳು ಸೇರಿದಂತೆ ಎಲ್ಲೆಡೆ ಹೂವು- ಹಣ್ಣುಗಳು, ಪೂಜಾ ಸಾಮಾಗ್ರಿಗಳು, ಗಣಪತಿ ಮೂರ್ತಿಗಳ ಖರೀದಿ ಭರಾಟೆ ಕಂಡುಬಂಡಿದೆ.

ಬೆಂಗಳೂರು: ನಾಳೆ ನಡೆಯುವ ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲೆಡೆ ಖರೀದಿ ಹಾಗೂ ಭರದ ಸಿದ್ಧತೆಗಳು ನಡೆಯುತ್ತಿವೆ.
ರಾಜಧಾನಿ ಪ್ರಮುಖ ಮಾರುಕಟ್ಟೆಗಳು ಸೇರಿದಂತೆ ಎಲ್ಲೆಡೆ ಹೂವು- ಹಣ್ಣುಗಳು, ಪೂಜಾ ಸಾಮಾಗ್ರಿಗಳು, ಗಣಪತಿ ಮೂರ್ತಿಗಳ ಖರೀದಿ ಭರಾಟೆ ಕಂಡುಬಂಡಿದೆ.
ಹೊಸ ಬಟ್ಟೆಗಳ ಖರೀದಿ ಕೂಡಾ ಭಾರೀ ಜೋರಾಗಿ ನಡೆಯುತ್ತಿದೆ. ಈ ಬಾರಿ ಗೌರಿ- ಗಣೇಶ ಎರಡೂ ಹಬ್ಬಗಳು ಸೋಮವಾರವೇ ಬಂದಿರುವುದು ವಿಶೇಷವಾಗಿದೆ.
ನಗರದ ಗಣೇಶ ದೇವಸ್ಥಾನಗಳನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸ್ಥಳೀಯ ಯುವಕರ ತಂಡಗಳು, ಗಣೇಶೋತ್ಸವ ಸಮಿತಿಗಳು ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ರಸ್ತೆಗಳಲ್ಲಿ ಪೆಂಡಾಲ್ ಹಾಕುವ ಕಾರ್ಯಗಳಲ್ಲಿ ತೊಡಗಿವೆ. ಈ ಬಾರಿ ರಾಜ್ಯ ಸರ್ಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಯಂತ್ರಣಕ್ಕೆ ಬಂದಿದ್ದು, ಮಣ್ಣಿನ ಮೂರ್ತಿಗಳ ಮಾರಾಟ ಎಲ್ಲೆಡೆ ಹೆಚ್ಚಾಗಿ ಕಂಡುಬಂದಿದೆ.
ಕೆಲವು ಕಡೆ ಸ್ಥಳೀಯ ಸಂಸ್ಥೆಗಳೇ ಮಣ್ಣಿನ ಮೂರ್ತಿಗಳನ್ನು ಉಚಿತವಾಗಿ ವಿತರಣೆ ಮಾಡಿವೆ. ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ವತಿಯಿಂದಲೂ ಮಣ್ಣಿನ ಮೂರ್ತಿಗಳ ಉಚಿತ ವಿತರಣೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಗೆ ಹಲವು ಕೆರೆ- ಕುಂಟೆಗಳನ್ನು ಗುರುತಿಸಲಾಗಿದ್ದು, ಅಲ್ಲಿ ವಿಸರ್ಜನೆಗೆ ಪ್ರತ್ಯೇಕ ಸ್ಥಳಾವಕಾಶ ಮಾಡಲಾಗಿದೆ.
ಸಾರ್ವಜನಿಕರು ನಿರ್ದಿಷ್ಟ ಸ್ಥಳದಲ್ಲಿ , ಇಲ್ಲವೇ ಸಂಚಾರಿ ವಾಹನಗಳ ತೊಟ್ಟಿಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸುವಂತೆ ಮನವಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ನಗರದೆಲ್ಲೆಡೆ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಲವೆಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಇದೇ ಮೊದಲ ಬಾರಿಗೆ ಧ್ವನಿಮುದ್ರಿತ ಕರೆಗಳ ಮೂಲಕ ಸಂದೇಶ ಕಳುಹಿಸುತ್ತಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಟ ಯಶ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಸುಧಾಕರ್ ಅವರ ಧ್ವನಿ ಸಂದೇಶಗಳು ಎಲ್ಲೆಡೆ ಕೇಳಿಬರುತ್ತಿವೆ. ಶನಿವಾರ ಮತ್ತು ಭಾನುವಾರ ಸಾವಿರಾರು ಜನರ ಮೊಬೈಲ್ ಗೆ ಈ ಸಂದೇಶ ಕಳುಹಿಸಲಾಗಿದ್ದು, ಒಟ್ಟು 5 ಲಕ್ಷ ಜನರ ಮೊಬೈಲ್ ಗೆ ಸಂದೇಶ ಕಳುಹಿಸುವ ಗುರಿ ಹೊಂದಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


