ರಾಜ್ಯ

ವಿಜಯಪುರ: ಭೀಮಾ ತೀರದ ಕೊಲೆ ಆರೋಪಿ ಬೈರಗೊಂಡಗೆ ಗೌರವ ಡಾಕ್ಟರೇಟ್

ಭೀಮಾತೀರದ ಕೊಲೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿ ಜಾಮೀನಿನ ಮೇಲೆ ಹೊರಬಂದಿರುವ ಮಹದೇವ ಸಾಹುಕಾರ ಬೈರಗೊಂಡ ಅವರಿಗೆ ಇಂಡೋನೇಷ್ಯಾ ಮೂಲದ ವಿಶ್ವವಿದ್ಯಾನಿಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿದೆ.

ವಿಜಯಪುರ: ಭೀಮಾ ತೀರದ ಕೊಲೆ ಆರೋಪಿ ಬೈರಗೊಂಡಗೆ ಗೌರವ ಡಾಕ್ಟರೇಟ್
ಭೀಮಾ ತೀರದ ಕೊಲೆ ಆರೋಪಿ ಬೈರಗೊಂಡಗೆ ಗೌರವ ಡಾಕ್ಟರೇಟ್
Published On :

ವಿಜಯಪುರ: ಭೀಮಾತೀರದ ಕೊಲೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿ ಜಾಮೀನಿನ ಮೇಲೆ ಹೊರಬಂದಿರುವ ಮಹದೇವ ಸಾಹುಕಾರ ಬೈರಗೊಂಡ ಅವರಿಗೆ ಇಂಡೋನೇಷ್ಯಾ ಮೂಲದ ವಿಶ್ವವಿದ್ಯಾನಿಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿದೆ.

ಇಂಡೋನೇಷಿಯಾದ ಏಷ್ಯನ್ ಇಂಟರ್ ನ್ಯಾಷನಲ್ ಇಂಡೋನೇಷಿಯಾ ವಿವಿ ಇಂಡೋನೇಷ್ಯಾ ಗಣರಾಜ್ಯದ ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಸಂಸ್ಥೆಯಾಗಿದೆ. ಈ ಸಾಂಸ್ಥೆ ಮಹದೇವ ಅರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರ್ಗಣಿಸಿ ಈ ಗೌರವ ನೀಡಿದೆ.

ಮಹದೇವ ಅವರು  1,500 ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಭೈರವನಾಥ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

ಇದೇ ವೇಳೆ ಕೊಲೆ ಆರೋಪಿಯಾಗಿರುವ ಬೈರಗೊಂಡಗೆ ಡಾಕ್ಟರೇಟ್ ನೀಡಿರುವ ಕುರಿತು ವಿಜಯಪುರದ ನಿವಾಸಿಗಳು ಆಘಾತಕ್ಕೊಳಗಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.