ರಾಮನಗರ: ಮಗು ಕೊಂದು ತಾಯಿ ಆತ್ಮಹತ್ಯೆ, ದುರಂತ ಕಂಡು ಪತಿಯೂ ನೇಣಿಗೆ ಶರಣು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಲೆ ಮಾಡಿದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ನಿ, ಮಗುವಿನ ಮೃತ ದೇಹ ಕಂಡು ಪತಿ ಕೂಡ ನೇಣಿಗೆ ಶರಣಾದ ಮನ ಕಲಕುವ ಘಟನೆ ರಾಮನಗರ ಜಿಲ್ಲೆಯ.

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಲೆ ಮಾಡಿದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ನಿ, ಮಗುವಿನ ಮೃತ ದೇಹ ಕಂಡು ಪತಿ ಕೂಡ ನೇಣಿಗೆ ಶರಣಾದ ಮನ ಕಲಕುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.
ಕನಕಪುರದ ಅಜೀಜ್ ನಗರದ ನಿವಾಸಿ ಪತಿ ಫೈರೋಜ್ (23), ಪತ್ನಿ ಹರ್ಷಬಾನು (19) ಹಾಗೂ ಒಂದೂವರೆ ವರ್ಷದ ಮಗು ಇಸ್ಮಾಯಿಲ್ ಸಾವನ್ನಪ್ಪಿದ ದುರ್ದೈವಿಗಳು.
ಮೃತರ ಕುಟುಂಬದಲ್ಲಿ ಸುಮಾರು ದಿನಗಳಿಂದ ಜಗಳ ನಡೆಯುತ್ತಿತ್ತು. ಕಳೆದ ಮೂರು ದಿನಗಳಿಂದ ಜಗಳ ಅತಿರೇಕಕ್ಕೆ ಹೋಗಿದ್ದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು ಎಂದು ತಿಳಿದು ಬಂದಿದೆ.
ಫೈರೋಜ್ ಹಾಗೂ ಹರ್ಷಬಾನು ಮಧ್ಯೆ ಉಂಟಾಗಿದ್ದ ಕಲಹವನ್ನು ಸ್ಥಳೀಯ ಮುಖಂಡರು ಹಾಗೂ ಪೊಲೀಸರು ರಾಜಿ ಸಂಧಾನ ಮೂಲಕ ಬಗೆಹರಿಸಿ, ದಂಪತಿಯನ್ನು ಒಂದು ಮಾಡಿದ್ದರು. ಆದರೆ ಸೋಮವಾರ ಮಧ್ಯಾಹ್ನ ಕೂಡ ಜಗಳ ನಡೆದಿದ್ದು ಪತಿ ಮನೆಯಿಂದ ಹೊರ ಹೋದ ಬಳಿಕ ಹರ್ಷಭಾನು ತನ್ನ ಮಗು ಇಸ್ಮಾಯಿಲ್‍ಗೆ ನೇಣು ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ನೇಣಿಗೆ ಶರಣಾಗಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


