ರಾಜ್ಯ

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು: ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ; ವಿಐಪಿ ವಾರ್ಡ್‌ ಗೆ ಶಿಫ್ಟ್‌

ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದು, ದೆಹಲಿಯ ಆರ್ ಎಂಎಲ್‌ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ದಾಖಲಿಸಿದ್ದಾರೆ.

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು: ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ; ವಿಐಪಿ ವಾರ್ಡ್‌ ಗೆ ಶಿಫ್ಟ್‌
ಡಿ.ಕೆ ಶಿವಕುಮಾರ್
Published On :

ನವದೆಹಲಿ: ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದು, ದೆಹಲಿಯ ಆರ್ಎಂಎಲ್‌ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ದಾಖಲಿಸಿದ್ದಾರೆ. 

ಹೈಶುಗರ್ ಮತ್ತು ಲೋ ಬಿಪಿಯಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಅವರ ರಕ್ತಪರೀಕ್ಷೆಯನ್ನು ವೈದ್ಯಾಧಿಕಾರಿಗಳು ನಡೆಸಿದ್ದಾರೆ. ಎಲ್ಲ ವೈದ್ಯಕೀಯ ಪರೀಕ್ಷೆಗಳ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

ಡಿಕೆ ಶಿವಕುಮಾರ್ ಅವರನ್ನು ಮೊದಲು ಆರ್‍ಎಂಎಲ್ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ತೀವ್ರ ಬಿಪಿ ಶುಗರ್ ಮತ್ತು ಎದೆ ನೋವಿನಿಂದ ಬಳಲುತ್ತಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಮತ್ತೊಮ್ಮೆ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಲ ಚೆಕಪ್ ಮಾಡಿ, ಆರೋಗ್ಯ ಸ್ಥಿರವಾಗಿದ್ದಲ್ಲಿ ಇಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ. 

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.