ರಾಜ್ಯ

ಮಂಗಳೂರು: ಸಾರ್ವಜನಿಕರೆದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ

ಮಂಗಳೂರು: ಸಾರ್ವಜನಿಕರೆದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಸಾರ್ವಜನಿಕರೆದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಸಂಪ್ಯದಲ್ಲಿ ನಡೆದಿದೆ,

ಹಿಂದೂ ಜಾಗರಣ ವೇದಿಕೆ  ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ(30) ಕೊಲೆಯಾದ ದುರ್ದೈವಿ. ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸಾರ್ವಜನಿಕರ ಎದುರಲ್ಲೇ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಯುವಕ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣವನ್ನು ಪಡೆದಿದ್ದನು. ಈ ವಿಚಾರಕ್ಕೆ ಕೆಲ ಯುವಕರು ಕಾರ್ತಿಕ್ ಜೊತೆ ಜಗಳಕ್ಕಿಳಿದಿದ್ದರು. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪಗೊಂಡ ಯುವಕರ ಗುಂಪು ಕಾರ್ತಿಕ್‍ಗೆ ಚೂರಿಯಿಂದ ಇರಿದು ಕೊಲೆ ಮಾಡಿದೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.