ಚಿಕ್ಕಮಗಳೂರು: ಬಸ್ಸುಗಳ ಮುಖಾಮುಖಿ ಡಿಕ್ಕಿ, ಓರ್ವ ಚಾಲಕ ಸಾವು
ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸರ್ಕಾರಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಕುಡ್ಲೂರು ಗೇಟ್ ಬಳಿ ಗುರುವಾರ ನಡೆದಿದೆ.

ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸರ್ಕಾರಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಕುಡ್ಲೂರು ಗೇಟ್ ಬಳಿ ಗುರುವಾರ ನಡೆದಿದೆ.
ಮೃತ ಚಾಲಕನನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗದ್ದಿಗೆರೆಯ ಪುಟ್ಟಸ್ವಾಮಿ ಎಂದು ಗುರುತಿಸಲಾಗಿದೆ.
ಮೈಸೂರಿನಿಂದ ಹೊಸಪೇಟೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಹಾಗೂ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಬೀರೂರು ಸಮೀಪ ಸಾಧಾರಣ ಮಳೆ ಸುರಿಯುತ್ತಿದ್ದರಿಂದ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.
ಬಸ್ಸಿನಲ್ಲಿ ಸುಮಾರು 35 ಜನ ಪ್ರಯಾಣಿಸುತ್ತಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೀರೂರು, ಕಡೂರು ಹಾಗೂ ತರೀಕೆರೆ ಆಸ್ಪತ್ರೆಗೆ ಹಾಗೂ ತಲೆಗೆ ತೀವ್ರ ಪೆಟ್ಟಾದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


