ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ; ಕಾರ್ಖಾನೆ ಗುತ್ತಿಗೆಗೆ ನೀಡಲು ಒಪ್ಪಿಗೆ
ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆ ಸಮಸ್ಯೆಗಳ ಬಗ್ಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಜೊತೆ ಬೆಂಗಳೂರಿನಲ್ಲಿ ಚರ್ಚೆ ನಡೆಸಿದರು.

ಬೆಂಗಳೂರು: ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆ ಸಮಸ್ಯೆಗಳ ಬಗ್ಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಜೊತೆ ಬೆಂಗಳೂರಿನಲ್ಲಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಕಂಪನಿಯ ಈಗಿನ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.
ಕಬ್ಬು ನುರಿಯುವ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಟಿ.ಸಿ.ಡಿ ಬಾಯ್ಲಿಂಗ್ ಹೌಸ್ ರಿಪೇರಿ ಮಾಡಿಸಬೇಕು, ಕೊನ್ನಳ್ಳಿ ಕೆರೆ ವಾಟರ್ ಲಯನ್ ಸ್ವಚ್ಛಗೊಳಿಸುವ ಕೆಲಸ ಮತ್ತು ಹೆಬ್ಬಾಳ ನೀರಿನ ಮಾರ್ಗವನ್ನು ಸರಿಪಡಿಸಬೇಕಾಗಿದೆ, ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು ಹೆಚ್ಚಿಸಬೇಕಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ರೈತರ ಕಬ್ಬು ಬೆಳೆಗೆ, ಕಬ್ಬು ಅರೆಯುವುದಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು. ಕಾರ್ಖಾನೆಯಲ್ಲಿ ಕೆಲಸ ಮಾಡುವ ನೌಕರರಿಗೂ ಸಹ ತೊಂದರೆ ಆಗಬಾರದು, ಹಾಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಹಾಗೂ ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಒಂದು ಪರಿಹಾರ ಕಂಡುಹಿಡಿಯಬೇಕು, ಕಾರ್ಖಾನೆಗಳಲ್ಲಿ ಯಾವುದೇ ಕಾರಣಕ್ಕೂ ಕೆಲಸ ಕಾರ್ಯಗಳು ನಿಲ್ಲಬಾರದು, ಇದರಿಂದ ರೈತರಿಗೆ ತೊಂದರೆ ಆಗುತ್ತದೆ. ಹಾಗಾಗಿ ಕಾರ್ಖಾನೆಗಳು ಸಹ ಲಾಭಕ್ಕೆ ಮರಳಬೇಕು, ರೈತರಿಗೂ ಒಳ್ಳೆಯ ಆದಾಯ ಬರಬೇಕು, ಈ ರೀತಿಯ ಒಂದು ಪರಿಹಾರ ಕಂಡುಹಿಡಿಯುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೈಶುಗರ್ ಕಂಪನಿಯ 330 ನೌಕರರು ವಿಆರ್‌ಎಸ್ ಪಡೆಯಲು ಸಿದ್ಧರಾಗಿದ್ದು, ಇದಕ್ಕೆ 22 ಕೋಟಿ ರೂಪಾಯಿ ಬೇಕಾಗುತ್ತದೆ, ಅವರೆಲ್ಲರಿಗೂ ಸ್ವಯಂ ನಿವೃತ್ತಿ ಅವಕಾಶ ಕೊಡಲಾಗುವುದು ಎಂದರು.
ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ಕೊಡಲು ಒಪ್ಪಿಕೊಂಡಿದ್ದಾರೆ. ಮೈ ಶುಗರ್ ಕಾರ್ಖಾನೆಯನ್ನು ಗುತ್ತಿಗೆಗೆ ಕೊಡಬೇಕೇ ಅಥವಾ ಒ ಅಂಡ್ ಎಂ ಮಾಡಬೇಕೇ ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದೇವೆ, ಒಂದು ವೇಳೆ ಒ ಅಂಡ್ ಎಂ ಮಾಡಿದರೆ ಪ್ರತಿ ವರ್ಷ 25 ಕೋಟಿ ರೂ. ನೀಡಬೇಕಾಗುತ್ತದೆ. ಈಗಲೇ ಸಾಕಷ್ಟು ಹಣ ಕಾರ್ಖಾನೆಗೆ ಕೊಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ನೀಡಿದರೆ ಸರ್ಕಾರಕ್ಕೆ ಹೊರೆ ಆಗುತ್ತದೆ, ಕೂಡಲೇ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಕೂಡಲೇ ಲೀಸ್ ಗೆ ಕೊಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಸಂಸದೆ ಸುಮಲತಾ ಮಾತನಾಡಿ, ಇಂದಿನ ಸಭೆಯಲ್ಲಿ ಮೈಶುಗರ್, ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಬಗ್ಗೆ ಚರ್ಚೆ ನಡೆದಿದೆ. ಪ್ರಸ್ತುತ ರೈತರು, ಕಾರ್ಖಾನೆ ಸಿಬ್ಬಂದಿಗೂ ತೊಂದರೆಯಾಗುತ್ತಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಕಾರ್ಖಾನೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚರ್ಚೆ ನಡೆದಿದೆ. ಮಂಡ್ಯ ಕಾರ್ಖಾನೆಯನ್ನು ಲೀಸ್‌ಗೆ ಕೊಡುವ ಬಗ್ಗೆಯೂ ಚರ್ಚೆ ನಡೆದಿದೆ, ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆಗೆ ಕೊಡಲು ಒಪ್ಪಿಗೆ ಸೂಚಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


