ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಹುಡುಕೋಣ: ಬಿಬಿಎಂಪಿಗೆ ಭಾಸ್ಕರ್ ರಾವ್ ಪತ್ರ
ಬೆಂಗಳೂರಿನ ರಸ್ತೆಗಳು ಪಾರ್ಕಿಂಗ್ ಜಾಗವಾಗಿ ಪರಿವರ್ತನೆಗೊಳ್ಳುತ್ತಿದ್ದು, ಇದರಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದಿ. ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಹುಡುಕೋಣ ಎಂದು ಬಿಬಿಎಂಪಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗುರುವಾರ ಪತ್ರ ಬರೆದಿದ್ದಾರೆ.

ಬೆಂಗಳೂರು: ಬೆಂಗಳೂರಿನ ರಸ್ತೆಗಳು ಪಾರ್ಕಿಂಗ್ ಜಾಗವಾಗಿ ಪರಿವರ್ತನೆಗೊಳ್ಳುತ್ತಿದ್ದು, ಇದರಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದಿ. ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಹುಡುಕೋಣ ಎಂದು ಬಿಬಿಎಂಪಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗುರುವಾರ ಪತ್ರ ಬರೆದಿದ್ದಾರೆ.
ವಾಹನ ನಿಲುಗಡೆ ನೀತಿ ಜಾರಿಗೊಳಿಸುವಂತೆ ಕೋರಿ ಬಿಬಿಎಂಪಿಗೆ ಪತ್ರ ಬರೆಯಲಾಗಿದೆ ಎಂದು ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.
ಶೈಕ್ಷಣಿಕ ಸಮಸ್ಯೆಗಳು, ವಾಣಿಜ್ಯ ಕೇಂದ್ರಗಳು ಹಾಗೂ ವಸತಿ ಪ್ರದೇಶಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇನ್ನು ಮುಂದೆ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕೊಡುವುದಿಲ್ಲ. ಇದಕ್ಕೆ ಪ್ರತ್ಯೇಕ ನೀತಿ ಜಾರಿಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಿದ್ದೇನೆಂದು ತಿಳಿಸಿದ್ದಾರೆ.
ಶುಲ್ಕ ಸಹಿತವಾದ ವಾಹನ ನಿಲುಗಡೆ ಪ್ರದೇಶಗಳನ್ನು ಬಿಬಿಎಂಪಿ ಗುರುತಿಸಿದೆ. ಆ ನಿಗದಿತ ಜಾಗದಲ್ಲಿ ವಾಹನಗಳು ನಿಲ್ಲಬೇಕು. ಬೇರೆಡೆ ವಾಹನ ನಿಂತರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ. ಈಗಾಗಲೇ ಸಿಬಿಡಿ ವ್ಯಾಪ್ತಿಯಲ್ಲಿ ಶಾಲಾ ವಾಹನಗಳನ್ನು ಶಾಲಾ ಆವರಣದಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಆ ಭಾಗದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಿದೆ. ಆದರೂ ಶಾಲೆಗಳಿರುವ ಕೆಲ ರಸ್ತೆಗಳಲ್ಲಿ ಶಾಲೆ ಪ್ರಾರಂಭ ಮತ್ತು ಬಿಡುವ ವೇಳೆ ಸಂಚರಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ 3800 ಬಿಎಂಟಿಸಿ ಬಸ್ ನಿಲ್ದಾಣಗಳಿವೆ. ಇವುಗಳ ಪೈಕಿ ಸಂಚಾರ ದಟ್ಟಣೆಗೆ ಕಾರಣವಾಗುತ್ತಿರುವ ಕೆಲವು ನಿಲ್ದಾಣಗಳ ಸ್ಥಳಾಂತರಕ್ಕೆ ಸಹ ನಿರ್ಧರಿಸಲಾಗಿದೆ. ನೋ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲುವ ವಾಹನಗಳನ್ನು ಟೋಯಿಂಗ್ ಮಾಡುವ ದರ ಸಹ ಹೆಚ್ಚಳವಾಗಲಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


