ರಾಜ್ಯ

ಬಿಎಂಟಿಸಿ ಬಸ್ ಡಿಕ್ಕಿ: 9ನೇ ತರಗತಿ ವಿದ್ಯಾರ್ಥಿ ಸಾವು

ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ರಾತ್ರಿ ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಡಿಕ್ಕಿ: 9ನೇ ತರಗತಿ ವಿದ್ಯಾರ್ಥಿ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ರಾತ್ರಿ ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಗ್ರಹಾರ ದಾಸರಹಳ್ಳಿಯ ಆಯುಷ್(14) ಮೃತ ವಿದ್ಯಾರ್ಥಿ. ಕಳೆದ ರಾತ್ರಿ 8ರ ವೇಳೆ ಮನೆಯ ಮುಂಭಾಗ ರಸ್ತೆ ದಾಟುತ್ತಿದ್ದಾಗ ವೀರೇಶ ಚಿತ್ರಮಂದಿರದ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಆಯುಷ್‍ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಆಯುಷ್, ವಿಜಯನಗರದ ಆರ್ಚಿಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಆತನ ಸಾವಿನ ಸುದ್ದಿ ತಿಳಿದ ಸಹಪಾಠಿಗಳು, ಶಿಕ್ಷಕರು ಮಮ್ಮಲ ಮರಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.