ಧಾರಾಕಾರ ಮಳೆಗೆ ಶಿವಮೊಗ್ಗದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು
ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಅರಳಿಹಳ್ಳಿ ಗ್ರಾಮದ ಮನೆಯೊಂದರ ಗೋಡೆ ಶನಿವಾರ ಬೆಳಗ್ಗೆ ಕುಸಿದಾಗ ಮನೆಯಲ್ಲಿ ಮಲಗಿದ್ದ ಉಮೇರಾ ಅಂಜುಮ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಉಮೇರಾ ಅಂಜುಮ್ ಅವರ ಪತಿ ಜಾಫರ್ ಖಾನ್ ಬಲಗಾಲು ಮುರಿದಿದೆ. ಆದರೆ, ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪವಾಡ ಸದೃಶವಾಗಿ ಅವರೆಲ್ಲ ಪಾರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


