ಸಂಪುಟ ವಿಸ್ತರಣೆ ಕುರಿತು ಯಾವುದೇ ಚಿಂತನೆಗಳಿಲ್ಲ: ಬಿಜೆಪಿ
ಪ್ರವಾಹ ಪೀಡಿತರಿಗೆ ಪರಿಹಾರ ನೀಡುವುದರತ್ತ ರಾಜ್ಯ ಸರ್ಕಾರ ಗಮನ ಹರಿದಿದ್ದು, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷ ಶನಿವಾರ ಹೇಳಿದೆ.

ಬೆಂಗಳೂರು: ಪ್ರವಾಹ ಪೀಡಿತರಿಗೆ ಪರಿಹಾರ ನೀಡುವುದರತ್ತ ರಾಜ್ಯ ಸರ್ಕಾರ ಗಮನ ಹರಿದಿದ್ದು, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷ ಶನಿವಾರ ಹೇಳಿದೆ.
34 ಸದಸ್ಯರ ಸಚಿವಾಲಯದಲ್ಲಿ 16 ಸ್ಥಾನಗಳೂ ಈಗಲೂ ಖಾಲಿಯಿದೆ. ಹೀಗಾಗಿ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂದು ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಬಿಜೆಪಿ, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ. ಭವಿಷ್ಯದಲ್ಲಿ ಆಗಬಹುದು. ಪ್ರಸ್ತುತ ರಾಜ್ಯಸರ್ಕಾರ ಪರಿಹಾರ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಹೇಳಿದೆ.
ರಾಜ್ಯದ ಪರಿಸ್ಥಿತಿ ಸುಧಾರಿಸುವ ಸಲುವಾಗಿ ಸರ್ಕಾರ ಪ್ರವಾಹ ಪೀಡಿತರಿಗೆ ಪರಿಹಾರ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೀಗಾಗಿ ಪ್ರಸ್ತುತವಂತೂ ಸಂಪುಟ ವಿಸ್ತರಣೆಯಿಲ್ಲ ಎಂದು ಬಿಜೆಪಿ ವಕ್ತಾರ ಜಿ.ಮಧುಸೂದನ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


