ರಾಜ್ಯ

ಮೊಹರಂ ಆಚರಣೆ ವೇಳೆ ವಿದ್ಯುತ್​ ತಗುಲಿ ಯುವಕ ಸಾವು

ಮೊಹರಂ ಆಚರಣೆ ವೇಳೆ ಅಲಾಯಿ ಕುಣಿಯುತ್ತಿದ್ದ ಯುವಕ ಲಾಗ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್​ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಮೊಹರಂ ಆಚರಣೆ ವೇಳೆ ವಿದ್ಯುತ್​ ತಗುಲಿ ಯುವಕ ಸಾವು
ಸಂಗ್ರಹ ಚಿತ್ರ
Published On :

ಕಂಪ್ಲಿ: ಮೊಹರಂ ಆಚರಣೆ ವೇಳೆ ಅಲಾಯಿ ಕುಣಿಯುತ್ತಿದ್ದ ಯುವಕ ಲಾಗ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್​ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಂಗಳವಾರ ನಡೆದಿದೆ

ಕಂಪ್ಲಿಯ 18ನೇ ವಾರ್ಡ್​ನ ತಳವಾರ ಓಣಿಯ ಉಪ್ಪಾರ ಕುಮಾರ್​ (24 ವರ್ಷ) ಮೃತ ದುರ್ದೈವಿ. ಇವರು ಅಲಾಯಿ ಕುಣಿಯುತ್ತಿದ್ದ ಸಂದರ್ಭದಲ್ಲಿ ಲಾಗ ಹೊಡೆಯಲು ಪ್ರಯತ್ನಿಸಿದ್ದರು. ಆಗ ಅವರ ಕಾಲು ಅಲಂಕಾರಕ್ಕೆ ಅಳವಡಿಸಿದ್ದ ವಿದ್ಯುತ್ ದೀಪದ ತಂತಿಗೆ ತಗುಲಿದ್ದರಿಂದ ವಿದ್ಯುತ್​ ಪ್ರವಹಿಸಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಪ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಶವವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಆಸ್ಪತ್ರೆ ಬಳಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಸರ್ಕಾರಿ ಆಸ್ಪತ್ರೆಗೆ ಶಾಸಕ ಜೆ.ಎನ್​. ಗಣೇಶ್​  ಭೇಟಿ ನೀಡಿ, ಮೃತನ ಕುಟುಂಬದವರನ್ನು ಸಾಂತ್ವನ ಹೇಳಿದರು. ಸಾಧ್ಯವಾಗುವ ರೀತಿಯಲ್ಲಿ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.  ಘಟನೆಗೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.