ಮಕ್ಕಳ ಜೊತೆ ಮನೆಬಿಟ್ಟು ಹೋದ ಪತ್ನಿ: ಮನನೊಂದ ಆಟೋ ಚಾಲಕ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದಾಗಿ ಮಕ್ಕಳ ಜೊತೆ ಪತ್ನಿ ಮನೆಬಿಟ್ಟು ಹೋದ ಕಾರಣ ನೊಂದ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಮಕ್ಕಳ ಜೊತೆ ಪತ್ನಿ ಮನೆಬಿಟ್ಟು ಹೋದ ಕಾರಣ ನೊಂದ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಾಲ್ಮೀಕಿ ನಗರದ ನಿವಾಸಿ ರಾಮಾಂಜನೇಯ ಮೃತ ದುರ್ದೈವಿ. ಈತನ ಪತ್ನಿ ಭವ್ಯ ತನ್ನ ಇಬ್ಬರು ಮಕ್ಕಳ ಜೊತೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಮಾಂಜನೇಯ ಅವರ ತಾಯಿ ರಂಗಮ್ಮ ಮನೆಗೆ ಬಂದು ಹಲವು ಬಾರಿ ಬಾಗಿಲು ತಟ್ಟಿದ್ದಾರೆ, ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಅಕ್ಕಪಕ್ಕದವರನ್ನು ಕರೆದು ಬಾಗಿಲು ಮುರಿಸಿದ್ದಾರೆ. ಒಳಗೆ ಬಂದಾಗ ಪ್ಯಾನಿಗೆ ನೇಣು ಹಾಕಿಕೊಂಡಿರುವುದು ತಿಳಿದು ಬಂದಿದೆ.
ದಂಪತಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು ಇತ್ತೀಚೆಗಷ್ಟೆ ನೆಲಮಂಗಲಕ್ಕೆ ಶಿಫ್ಟ್ ಆಗಿದ್ದರು, ಆದರೆ ನೆಲಮಂಗಲಕ್ಕೆ ಶಿಫ್ಟ್ ಆಗಿದ್ದು ಭವ್ಯಗೆ ಇಷ್ಟವಿರಲಿಲ್ಲ, ಹೀಗಾಗಿ ಪ್ರತಿದಿನ ಪತಿ ಜೊತೆ ಜಗಳ ಮಾಡುತ್ತಿದ್ದಳು. ತನ್ನ ಪತ್ನಿ ಒಂದು ಮಾತು ಹೇಳದೇ ಹೋಗಿದ್ದಕ್ಕಾಗಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.
ತನ್ನ ಪತ್ನಿಗೆ ಕರೆ ಮಾಡಿ ಹಲವು ಬಾರಿ ಆಕೆಯ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಆಕೆ ಯಾವುದಕ್ಕ ಪ್ರತಿಕ್ರಿಯೆ ನೀಡಲಿಲ್ಲ,ಹೀಗಾಗಿ ಸಾವಿಗೆ ಶರಣಾಗಿದ್ದಾನೆ. ತಾಯಿ ರಂಗಮ್ಮ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


