ದುಬಾರಿ ಸಂಚಾರಿ ದಂಡಕ್ಕೆ ಜನಾಕ್ರೋಶ: ಗುಜರಾತ್ ಹಾದಿಯತ್ತ ಕರ್ನಾಟಕ, ಇಳಿಕೆಯಾಗುತ್ತಾ ದಂಡ!
ನೂತನ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ದಂಡದ ವಿಚಾರ ಜನರ ಆಕ್ರೋಶಕ್ಕೆ ತುತ್ತಾಗಿರುವಂತೆಯೇ ಗುಜರಾತ್ ನಂತೆಯೇ ಇದೀಗ ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಕಡಿತ ಮಾಡುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.

ಬೆಂಗಳೂರು: ನೂತನ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ದಂಡದ ವಿಚಾರ ಜನರ ಆಕ್ರೋಶಕ್ಕೆ ತುತ್ತಾಗಿರುವಂತೆಯೇ ಗುಜರಾತ್ ನಂತೆಯೇ ಇದೀಗ ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಕಡಿತ ಮಾಡುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ಪತ್ರಿಕೆಯೊಂದು ವರದಿ ಮಾಡಿದ್ದು, ಸಂಚಾರ ನಿಯಮ ಉಲ್ಲಂಘನೆಯ ದಂಡದ ಪ್ರಮಾಣದ ಬಗ್ಗೆ ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಗುಜರಾತ್ ಮಾದರಿಯಲ್ಲಿ ದಂಡ ಪ್ರಮಾಣವನ್ನು ಪರಿಷ್ಕರಿಸಲು ಮುಂದಾಗಿದೆ ಎನ್ನಲಾಗಿದೆ.
ಮೋಟಾರು ವಾಹನ (ತಿದ್ದುಪಡಿ) ಮಸೂದೆ ಜಾರಿ ಬರುತ್ತಿದ್ದಂತೆ ರಾಜ್ಯದ ಎಲ್ಲೆಡೆ ಸಂಚಾರಿ ಪೊಲೀಸರು ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಭಾರಿ ಮೊತ್ತದ ದಂಡ ವಿಧಿಸುತ್ತಿರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗುತ್ತಿದೆ. ದುಬಾರಿ ದಂಡದ ಕುರಿತು ದಿನಕ್ಕೊಂದು ರೀತಿಯ ಸುದ್ದಿಗಳು ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಜೋರು ಚರ್ಚೆ ನಡೆಯುತ್ತಿದೆ.
ಇನ್ನು ಸಂಚಾರಿ ನಿಯಮ ಉಲ್ಲಂಘನೆ ನಿಯಮ ಜಾರಿ ಬಳಿಕ ದಂಡದ ಪ್ರಮಾಣವನ್ನು ಇಳಿಸುವಂತೆ ಸಾರ್ವಜನಿಕ ವಲಯದಲ್ಲಿ ಒತ್ತಡವೂ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗುಜರಾತ್ ನಂತೆಯೇ ದಂಡದ ಪ್ರಮಾಣ ಕಡಿತಕ್ಕೆ ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ದುಬಾರಿ ದಂಡ ಪಾವತಿಸಿದ ಕೆಲವರು ನೇರವಾಗಿ ಶಾಸಕರು ಮತ್ತು ಸಚಿವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಹಲವು ಸಚಿವರು ಕೂಡ ದಂಡದ ಪ್ರಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಾರಿಗೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಬುಧವಾರ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದಂಡ ಪ್ರಮಾಣ ಕಡಿಮೆ ಮಾಡುವ ಬಗ್ಗೆ ತಾವೇ ಪ್ರಸ್ತಾಪಿಸಿದರು.
‘ದುಬಾರಿ ದಂಡದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ದಂಡದ ಪ್ರಮಾಣವನ್ನು ಇಳಿಸಬೇಕು. ಗುಜರಾತ್‌ನಿಂದ ಆದೇಶ ಪ್ರತಿಯನ್ನು ತರಿಸಿಕೊಂಡು, ದಂಡದ ಪ್ರಮಾಣವನ್ನು ಕೂಡಲೇ ಇಳಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಸ್ತೆ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ‘ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019’ ಕ್ಕೆ ಸಂಸತ್ತು ಒಪ್ಪಿಗೆ ನೀಡಿತ್ತು. ಇದೇ ತಿಂಗಳ ಆರಂಭದಿಂದ ಈ ಕಾನೂನು ರಾಷ್ಟ್ರವ್ಯಾಪಿ ಜಾರಿಗೆ ಬಂದಿದೆ.
Related Article
ಹೊಸ ಸಂಚಾರಿ ದಂಡ ತುಂಬಾ ಕಠಿಣವಾಗಿದೆ, ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲ್ಲ: ಮಮತಾ
ವಾಹನಗಳಿಗೆ ಜಿಎಸ್ಟಿ ದರ ಇಳಿಕೆ ನಿರ್ಧಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬಿಟ್ಟದ್ದು: ಗಡ್ಕರಿ
ದಂಡ ವಸೂಲಿಯಲ್ಲೂ ದಾಖಲೆ; ಟ್ರಕ್ ಡ್ರೈವರ್ಗೆ 1.41 ಲಕ್ಷ ರೂ. ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್!
ಮೋಟಾರು ವಾಹನ ತಿದ್ದುಪಡಿ ಕಾಯ್ದೆ: ದಂಡ ಕಡಿಮೆಗೊಳಿಸಿದ ಗುಜರಾತ್ ಸರ್ಕಾರ
ಟ್ರಾಫಿಕ್ ಪೊಲೀಸರ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರನ ಮಾಸ್ಟರ್ ಪ್ಲಾನ್, ವಿಡಿಯೋ ವೈರಲ್!
ವಾಹನ ವಿಮೆ ನವೀಕರಣ ಮಾಡಿಸಬೇಕೇ? ದುಬಾರಿ ದಂಡದ ಜೊತೆಗೆ ಸವಾರರಿಗೆ ಮತ್ತೊಂದು ಆಘಾತ!
ಟ್ರಾಫಿಕ್ ಪೊಲೀಸ್ ವಾಹನ ತಡೆಯುತ್ತಿದ್ದಂತೆಯೇ ಹೃದಯಾಘಾತ; ಕಾರು ಚಾಲಕನ ಸಾವು!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


