ಬೆಂಗಳೂರು: ಶಿಕ್ಷಕರ ವರ್ಗಾವಣೆ: ಶಿಕ್ಷಣ ಸಚಿವರ ಜೊತೆ ಎಂಎಲ್ ಸಿಗಳ ಸಭೆ
ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತೊಡಕಾಗದಂತೆ ಶಾಸಕರು ನೀಡಿದ ಸಲಹೆಗಳನ್ನು ಆರಿಸಿ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಚರ್ಚಿಸಲಾಗುವುದು, ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನಗಳ ಧರಣಿ ಸಮಯದಲ್ಲಿ ತಿದ್ದುಪಡಿ ಅಂಗೀಕಾರವಾಗಿತ್ತು. ಆದರೆ ಈ ಬಾರಿ ಮಂಡಿಸುವಾಗ ಸವಿಸ್ತಾರವಾಗಿ ಚರ್ಚೆಗೆ ಅವಕಾಶ ಕಲ್ಪಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ನೇಹಿ ವರ್ಗಾವಣೆ ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಕ್ಯಾನ್ಸರ್ ಪೀಡಿತ ಶಿಕ್ಷಕಿಯೊಬ್ಬರಿಗೆ ಮಾನವೀಯ ನೆಲೆಗಟ್ಟಿನಲ್ಲಿ ವರ್ಗಾವಣೆ ವಿನಾಯಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಶಿಕ್ಷಕಿ ವರ್ಗಾವಣೆ ಕುರಿತಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅವರು ವರ್ಗಾವಣೆ ಆದೇಶ ರದ್ದು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


