ಶೀಘ್ರದಲ್ಲೇ ನೂತನ ಕೈಗಾರಿಕಾ ನೀತಿ ಜಾರಿ: ಸಚಿವ ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನೂತನ ಕೈಗಾರಿಕಾ ನೀತಿ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಗುಜರಾತ್, ಮಧ್ಯಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಕೈಗಾರಿಕಾ ನೀತಿಗಳನ್ನು ಅಧ್ಯಯನ ಮಾಡಿ ಉತ್ತಮವಾದ ನೂತನ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ.
ಕೈಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲಿ ನಮ್ಮ ರಾಜ್ಯ ಕೂಡಾ ಇದೆ. ಕೈಗಾರಿಕಾ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಲು ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಭಾಗಗಳಲ್ಲಿ ಉದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಉದ್ಯಮಗಳಿಗೆ ಅನುಕೂಲ ಮಾಡಿಕೊಡಲಾಗುತ್ತದೆ. ಇನ್ನು ಮುಂದೆ ಉತ್ೇತರ ಕರ್ನಾಟಕಕ್ಕೂ ದೇಶದ ದೊಡ್ಡ ದೊಡ್ಡ ಕೈಗಾರಿಕೆಗಳನ್ನು ತರಲಾಗುತ್ತದೆ. ಹೀಗಾಗಿ ಕೈಗಾರಿಕಾ ಅಭಿವೃದ್ಧಿ ಗಾಗಿ ಹೊಸ ನೀತಿ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


