ನಿಷೇಧಿತ ಪ್ಲಾಸ್ಟಿಕ್ ಉತ್ಪನ ಬಳಕೆ ತಡೆಗೆ ಗಡುವು ನೀಡಿದ ಮೇಯರ್ ಗಂಗಾಂಬಿಕೆ
ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗಳನ್ನು ತಡೆಯುವ ಸಲುವಾಗಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಅಕ್ಟೋಬರ್ ವರೆಗೂ ಗಡುವು ನೀಡಿದ್ದಾರೆ.

ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗಳನ್ನು ತಡೆಯುವ ಸಲುವಾಗಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಅಕ್ಟೋಬರ್ ವರೆಗೂ ಗಡುವು ನೀಡಿದ್ದಾರೆ.
ಮಾಲ್ ಗಳು, ಸೂಪರ್ ಮಾರುಕಟ್ಟೆ, ಹೋಟೆಲ್, ರೆಸ್ಟೋರೆಂಟ್ ಗಳು ಪ್ಲಾಸ್ಟಿಕ್'ಗಳನ್ನು ಅತೀ ಹೆಚ್ಚು ಬಳಕೆ ಮಾಡುತ್ತಿದ್ದು, ಕೂಡಲೇ ಬಳಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ, ಹೆಚ್ಚಿನ ದಂಡ ತೆರಬೇಕಾಗುತ್ತದೆ ಎಂದು ಮೇಯರ್ ಎಚ್ಚರಿಸಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಕೆ ಮಾಡುವ ವ್ಯಾಪಾರಿಗಳು, ಉದ್ದಿಮೆದಾರರ ವ್ಯಾಪಾರ, ಉದ್ದಿಮೆ ಪರವಾನಗಿ ರದ್ದುಪಡಿಸುವುದು, ದಂಡ ಪ್ರಮಾಣ ಮತ್ತಷ್ಟು ಹೆಚ್ಚಿಸುವಂತಹ ಇನ್ನಷ್ಟು ಕಠಿಣ ಕ್ರಮಗಳನ್ನು ದಿನಗಳ ದಿನಗಳಲ್ಲಿ ಕೈಗೊಳ್ಳಲಾಗುತ್ತದೆ ಎಂದು ಮೇಯರ್ ಹೇಳಿದ್ದಾರೆ.
ಪ್ಲಾಸ್ಟಿಕ್ ಉತ್ಪನ್ನಗಳ ಬದಲು ಪರಿಸರ ಸ್ನೇಹಿ ಉತ್ಪನ್ನಗಳ ಬಳಕೆ ಪ್ರೋತ್ಸಾಹಿಸಲು ಬಿಬಿಎಂಪಿಯು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಪರ್ಯಾಯ ಉತ್ಪನ್ನಗಳ ವಿಶೇಷ ಮೇಳ ಉದ್ಘಾಟಿಸಿ ಮೇಯರ್ ಮಾತನಾಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಸಂಪೂರ್ಣ ನಿಯಂತ್ರಣಕ್ಕೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಮಾರುಕಟ್ಟೆ ಅಂಗಡಿಗಳಲ್ಲಿ ವ್ಯಾಪಾರಿಗಳು ಗ್ರಾಹಕರಿಗೆ ಪ್ಲಾಸ್ಟಿಕ್ ಕೈ ಚೀಲದಲ್ಲಿ ಉತ್ಪನ್ನಗಳನ್ನು ನೀಡಬಾರದು ಎಂದು ಸೂಚಿಸಲಾಗಿದೆ. ಹೋಟೆಲ್ ಗಳಲ್ಲಿ ಆಹಾರ ಪಾರ್ಸೆಲ್ ನೀಡಲು ಕಬ್ಬಿನ ತ್ಯಾಜ್ಯದಿಂದ ಉತ್ಪಾದಿಸಿ ಬಾಕ್ಸ್'ಗಳನ್ನು ಬಳಸುವಂತೆ ತಿಳಿಸಲಾಗಿದೆ. ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಉತ್ನನ್ನ ಬಳಸುವವರಿಗೆ ವಿಧಿಸುವ ದಂಡ ಹೆಚ್ಚಿಸುವುದು, ಉದ್ದಿಮೆ, ವ್ಯಾಪಾರ ಪರವಾನಗಿ ರದ್ದು ಪಡಿಸುವ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


