ರಾಜ್ಯ

ಮೈಸೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಆರ್​ಟಿಒ ಇನ್​ಸ್ಪೆಕ್ಟರ್ ದುರ್ಮರಣ

ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರ್​ಟಿಒ ಇನ್​ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.

ಮೈಸೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಆರ್​ಟಿಒ ಇನ್​ಸ್ಪೆಕ್ಟರ್ ದುರ್ಮರಣ
ಮೈಸೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಆರ್​ಟಿಒ ಇನ್​ಸ್ಪೆಕ್ಟರ್ ದುರ್ಮರಣ
Published On :

ಮೈಸೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರ್​ಟಿಒ ಇನ್​ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.

ಟಿ.ನರಸೀಪುರದ ಸೋಸಲೆ ಗ್ರಾಮದ ಬಳಿ ಬನ್ನೂರು ಮುಖ್ಯರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಗ್ರಾಮದ ನಿವಾಸಿ ಅಬ್ದುಲ್ ಮಜೀದ್ ಎಂಬುವರ ಪುತ್ರ ಅಬ್ದುಲ್ ನಸೀಮ(45) ಎಂಬ ಆರ್​ಟಿಒ ಇನ್​ಸ್ಪೆಕ್ಟರ್ ಸಾವಿಗೀಡಾಗಿದ್ದಾರೆ. ಇನ್ನು ಚಾಲಕ ಮೈಸೂರಿನ ಸವರದ್ ಎಂಬುವರ ಪುತ್ರ ಫಾರುಕ್ ಗಾಯಾಳುವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಬ್ದುಲ್ ಅವರು ಮಂಡ್ಯ ನ್ಯಾಯಾಲಯದಲ್ಲಿ ಪ್ರಕರಣವೊಂದರ ಮಾಹಿತಿ ನೀಡಿ ಹಿಂತಿರುಗುತ್ತಿದ್ದರು. ಕಾರು ಹಾಗೂ ಲಾರಿ ಎರಡೂ ವಾಹನಗಳು ಅತಿಯಾದ ವೇಗದಿಂದ ಬರುತ್ತಿದ್ದವೆನ್ನಲಾಗಿದ್ದು, ಇದುವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಡಿ ಸಿಕ್ಕಿದ ಕಾರು ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬದ ಪಕ್ಕದಲ್ಲಿ ನಿಂತಿದ್ದರಿಂದ ಎಡಭಾಗದಲ್ಲಿ ಕುಳಿತಿದ್ದ ಅಬ್ದುಲ್ ನಸೀಮ್ ತಲೆ ಸೇರಿದಂತೆ ಮೇಲ್ಬಾಗಕ್ಕೆ ತೀವ್ರ ತೆರನಾದ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಆರ್​ಟಿಒ ಇನ್​ಸ್ಪೆಕ್ಟರ್ ಅಬ್ದುಲ್ ಮೈಸೂರಿನ ರಾಜೀವ್ ನಗರ ನಿವಾಸಿಯಾಗಿದ್ದು, ಚಾಮರಾಜನಗರ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ವಾಹನ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮರಣೋತ್ತರ ಪರೀಕ್ಷೆ ನಂತರ ಅಧಿಕಾರಿಯ ಶವವನ್ನು ವಾರಸುದಾರರಿಗೆ ನೀಡಲಾಗಿದೆ. ಇತ್ತ ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ಅವನ ಪತ್ತೆಗ ಕಾರ್ಯಾಚರಣೆ ನಡೆದಿದೆ. ಘಟನೆ ಕುರಿತಂತೆ  ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.