ಕನ್ನಡದಂತೆ ಹಿಂದಿಗೂ ಮಹತ್ವ ನೀಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ: ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಲ್ಲಿನ ನಂದಿಭವನದಲ್ಲಿ ನಡೆದ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ 6ನೇ ರಾಜ್ಯಮಟ್ಟದ ಹಿಂದಿ ಶೈಕ್ಷಣಿಕ ಸಮಾರಂಭ ಮತ್ತು ಹಿಂದಿ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಸುರೇಶ್ ಕುಮಾರ್ ಮಾತನಾಡಿದರು.
ಮಾಜಿ ಪ್ರಧಾನಿ ದಿ.ಅಟಲ್‌ಬಿಹಾರಿ ವಾಜಪೇಯಿ ಅವರಿಗೆ ಹಿಂದಿ ಭಾಷೆ ಸಾಹಿತ್ಯದಲ್ಲಿ ಒಳ್ಳೆಯ ಪಾಂಡಿತ್ಯ ಇತ್ತು. ವಾಜಪೇಯಿ ಅವರಿಂದ ಸ್ಫೂರ್ತಿ ಪಡೆದು ಹಿಂದಿ ಕಲಿತಿದ್ದೇವೆ. ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಅವರು. ಹೀಗಾಗಿ ರಾಜ್ಯದಲ್ಲಿ ನಮ್ಮ ಮಾತೃಭಾಷೆ ಕನ್ನಡಕ್ಕೆ ನೀಡಿರುವ ಪ್ರಾಮುಖ್ಯತೆಯಂತೆಯೇ ಹಿಂದಿ ಭಾಷೆ ಕಲಿಕೆಗೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು.
ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರ ಆದಷ್ಟು ಬೇಗ ಪರಿಹರಿಸುವ ಕೆಲಸ ಮಾಡಲಿದೆ ಎಂದು ಸುರೇಶ್ ಕುಮಾರ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


