ರಾಜ್ಯ

ಪ್ರಚೋದನಕಾರಿ ಭಾಷಣ: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು

ಪ್ರಚೋದನಕಾರಿ ಭಾಷಣ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆನಂದ್....

ಪ್ರಚೋದನಕಾರಿ ಭಾಷಣ: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
ಕೆ.ಎಸ್‍.ಈಶ್ವರಪ್ಪ
Published On :

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆನಂದ್, ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ದೂರು ನೀಡಿದ್ದಾರೆ. 

ಸೆ 15 ರಂದು ನಗರದ ಪುರಭವನದಲ್ಲಿ ಶ‍್ರೀರಾಮ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ನಾಯಕರು ಹಾಗೂ ಮುಸ್ಲಿಂ ಜನಾಂಗ, ಗೋಹತ್ಯೆ ವಿಷಯವನ್ನು ಪ್ರಸ್ತಾಪಿಸಿ ದೇಶಭಕ್ತ ಮುಸಲ್ಮಾನರು ಬಿಜೆಪಿಗೆ ಮತ ಹಾಕುತ್ತಾರೆ. ಪಾಕಿಸ್ತಾನಕ್ಕೆ ಬೆಂಬಲಿಸುವವರು ಬಿಜೆಪಿಗೆ ಮತದಾನ ಮಾಡುವುದಿಲ್ಲ. ಮುಸ್ಲಿಂ ಮತ ಪಡೆದು ಗೆಲುವು ಸಾಧಿಸುವ ಶಾಸಕರು ಹಿಜಡಾಗಳು ಎಂದು ಅವಮಾನಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಈಶ್ವರಪ್ಪ ಅವರ ಈ ಹೇಳಿಕೆ ಹಿಂದೂ-ಮುಸ್ಲಿಂರ ನಡುವೆ ಸಂಘರ್ಷಕ್ಕೆ ಪ್ರೇರಣೆ ನೀಡುತ್ತದೆ. ರಾಜ್ಯದಲ್ಲಿ ಕೋಮುದೊಂಭಿ ಕೆರಳಿಸುವ ಉದ್ದೇಶವಾಗಿದೆ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವುದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್ ದೂರಿನಲ್ಲಿ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.