ಡಿ.ಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಮಂಗಳವಾರ ಜಾರಿ ನಿರ್ದೆಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ

ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗುರುವಾರ ಹಾಜರಾಗುವುದಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಜಾರಿ ನಿರ್ದೆಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ. ಸೆ 14ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದರು.
ಒಂದು ಸಾಲಿನ ಬರಹದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ನೊಟೀಸ್ ನಲ್ಲಿ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಾರಣ ನೀಡಿಲ್ಲ, ತಾವು ಸೇರಿದಂತೆ ಒಟ್ಟು 184 ಮಂದಿಗೆ ನೊಟೀಸ್ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಡಿ.ಕೆ ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಿದ್ದಾರೆಯೋ ಎಂಬುದನ್ನು ನೊಟೀಸ್ ನಲ್ಲಿ ನಮೂದಿಸಿಲ್ಲ. ಶಿವಕುಮಾರ್ ಹಾಗೂ ತಮ್ಮ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅಕೌಂಟ್ ನಿಂದ ಹೆಬ್ಬಾಳ್ಕರ್ ಗೆ ಹಣ ವರ್ಗಾವಣೆ ಆಗಿರುವ ಬಗ್ಗೆ ಇಡಿಗೆ ದಾಖಲೆ ಲಭ್ಯವಾದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


