ವಿಜಯನಗರವನ್ನು ಜಿಲ್ಲೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉಜ್ಜಯಿನಿ ಜಗದ್ಗುರುಗಳು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉಜ್ಜಯಿನಿ ಜಗದ್ಗುರುಗಳು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಆನಂದ್ ಸಿಂಗ್, ವಿಜಯನಗರವನ್ನು ಜಿಲ್ಲೆ ಮಾಡಬೇಕು ಎನ್ನುವುದು ಅಲ್ಲಿನ ಜನಪ್ರತಿನಿಧಿಗಳ ಹಾಗೂ ಅಲ್ಲಿನ ಜನರ ಬೇಡಿಕೆಯಾಗಿದೆ. ಹಾಗಾಗಿ ಇಂದು ನಡೆಯುವ ಕ್ಯಾಬಿನೆಟ್‌ನಲ್ಲಿ ಈ ವಿಷಯವನ್ನು ಮಂಡಿಸಿ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದರು.
ಅಲ್ಲಂ ವಿರಭದ್ರಪ್ಪ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಒಂದು ವಿಶ್ವದಲ್ಲಿ ಹೆಸರು ವಾಸಿಯಾಗಿರುವ ನಗರವಾಗಿದೆ. ಯುನೆಸ್ಕೋ ಇದನ್ನು ಪರಿಗಣಿಸಿದೆ. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಿದರೆ ಆಡಳಿತಾತ್ಮಕವಾಗಿ ತುಂಬ ಅನುಕೂಲವಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಉಜ್ಜಯಿನಿ ಸದ್ಗುರುಗಳು ಮಾತನಾಡಿ, ವಿಜಯನಗರದ ಗತ ವೈಭವ ಮರು ಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತು ಮೈಸೂರು ದಸರೆಗೆ ಪ್ರೇರಣೆ ಸಿಕ್ಕಿರುವುದೇ ವಿಜಯನಗರ ಸಾಮ್ರಾಜ್ಯ. ಹಾಗಾಗಿ, ಈ ನೆಲಕ್ಕೆ ತನ್ನದೇ ಆದ ವಿಶೇಷ ಗುಣಗಳು ಇವೆ. ಹಾಗಾಗಿ ಇದನ್ನು ಜಿಲ್ಲೆಯ ನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


