ವಿದ್ಯಾರ್ಥಿಗಳು ಹಣ ಸಂಗ್ರಹಿಸಿ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿ: ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸುಮಾರು 60 ಸಾವಿರ ಕೋಟಿ ರು ನಷ್ಟವಾಗಿದ್ದು, ನೆರೆ ಪರಿಹಾರ ಕಾರ್ಯಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸುಮಾರು 60 ಸಾವಿರ ಕೋಟಿ ರು ನಷ್ಟವಾಗಿದ್ದು, ನೆರೆ ಪರಿಹಾರ ಕಾರ್ಯಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕರ್ನಾಟಕ ಉನ್ನತ ಶಿಕ್ಷಣ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 150 ವರ್ಷಗಳಲ್ಲಿ ಇಂಥ ಭೀಕರ ಪ್ರವಾಹ ನೋಡಿರಲಿಲ್ಲ, ಹೀಗಾಗಿ ನೆರೆ ಪರಿಹಾರ ಕಾರ್ಯಕ್ಕೆ ವಿದ್ಮಾರ್ಥಿಗಳು ಕೈ ಜೋಡಿಸಬೇಕು ಎಂದು ಹೇಳಿದ್ದಾರೆ.
ಎನ್ ಎಸ್ ಎಸ್ ವಿದ್ಯಾರ್ಥಿಗಳು ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕೆಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಆರ್ಥಿಕವಾಗಿ ನೆರವು ನೀಡುವಂತೆ ಡಿಸಿಎಂ . ಕೋರಿದ್ದಾರೆ. ವಿದ್ಯಾರ್ಥಿಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಚಿಂತಿಸುವಂತೆ ಉಪಕುಲಪತಿಗಳಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


