ರಾಜ್ಯ

ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 137.32 ಕೋಟಿ ರೂ. ಸಂಗ್ರಹ

ರಾಜ್ಯದ ನೆರೆ ಹಾಗೂ ಅತಿವೃಷ್ಠಿ ಪರಿಸ್ಥಿತಿಗೆ ಸ್ಪಂದಿಸಿರುವ ನಾಡಿನ ಜನತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸ್ವಯಂ ಪ್ರೇರಣೆಯಿಂದ 137.32 ಕೋಟಿ ರೂ ದೇಣಿಗೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 137.32 ಕೋಟಿ ರೂ. ಸಂಗ್ರಹ
ಪ್ರವಾಹ ಸಂತ್ರಸ್ತರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯದ ನೆರೆ ಹಾಗೂ ಅತಿವೃಷ್ಠಿ ಪರಿಸ್ಥಿತಿಗೆ ಸ್ಪಂದಿಸಿರುವ ನಾಡಿನ ಜನತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸ್ವಯಂ ಪ್ರೇರಣೆಯಿಂದ 137.32 ಕೋಟಿ ರೂ ದೇಣಿಗೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಗೆ ಆಗಸ್ಟ್ 9 ರಿಂದ ಸೆಪ್ಟೆಂಬರ್ 18ರ ವರೆಗೆ 137.32 ಕೋಟಿ ರೂ. ದೇಣಿಗೆ ಜಮಾ ಆಗಿದೆ.

ವಿವಿಧ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ನೌಕರರು, ವಿವಿಧ ನಿಗಮ-ಮಂಡಳಿಗಳ ನೌಕರರು ಉದಾರವಾಗಿ ದೇಣಿಗೆ ನೀಡಿದ್ದು, ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಕೋಟಿ ರೂ.,ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ಕೋಟಿ ರೂ. ದೇಣಿಗೆ ನೀಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ.ಅಂತೆಯೇ ಎನ್ಎಂಡಿಸಿ 10 ಕೋಟಿ ರೂ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 5 ಕೋಟಿ ರೂ.ದೇಣಿಗೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘ,ನಿವೃತ್ತ ನೌಕರರ ಸಂಘಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒಂದು ದಿನದ ವೇತನ 200 ಕೋಟಿ ರೂ ನೀಡುವುದಾಗಿ ವಾಗ್ದಾನ ಮಾಡಿವೆ.ನಿಗಮ, ಮಂಡಳಿಗಳು ಸಹ ತಮ್ಮ ಶಕ್ತ್ಯಾನುಸಾರ ದೇಣಿಗೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.