ರಾಜ್ಯ

ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಸಾವು

ಕೆ.ಆರ್.ಪುರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಆರೀಫಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೆ.ಆರ್.ಪುರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಆರೀಫಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. 

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕ ಇಮ್ರಾನ್'ಗೆ (8)ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಬೆಸ್ಕಾಂ ಅಧಿಕಾರಿಗಳು ಮತ್ತು ಮನೆ ಮಾಲೀಕನ ವಿರುದ್ಧ ನಿರ್ಲಕ್ಷ್ಯ ಪ್ರಕರಣದಡಿ ಬಾಲಕಿ ತಂದೆ ದೂರು ದಾಖಲಿಸಿದ್ದಾರೆ. 

ಬಾಲಕಿ ಆರೀಫಾ ಮತ್ತು ಇಮ್ರಾನ್ ಅಕ್ಕಮಪಕ್ಕದ ನಿವಾಸಿಗಳಾಗಿದ್ದಾರೆ. ಆರೀಫಾ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಇಮ್ರಾನ್ ಸ್ಥಳೀಯ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ. 

ಸೆ.14ರಂದು ಸಂಜೆ ಮನೆ ಮಹಡಿ ಮೇಲೆ ಇಬ್ಬರೂ ಮಕ್ಕಳು ಆಟ ಆಡಲು ತೆರಳಿದ್ದರು. ಮಹಡಿಯಿಂದ ಸುಮಾರು ನಾಲ್ಕು ಅಡಿ ಎತ್ತರದಲ್ಲಿ ಹೈಟೆನ್ಷನ್ ವಿದ್ಯುತ್ ಮೊದಲು ಇಮ್ರಾನ್'ಗೆ ತಗುಲಿದ್ದು, ಕೆಳಗೆ ಬಿದ್ದ ಬಾಲಕನನ್ನು ಆರೀಫಾ ಎತ್ತಲು ಹೋಗಿದ್ದಳು. ಈ ವೇಳೆ ಬಾಲಕಿಗೂ ವಿದ್ಯುತ್ ಸ್ಪರ್ಶಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಬುಧವಾರ ನಸುಕಿನಲ್ಲಿ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.