ದಸರಾ ಉತ್ಸವ ಹಿನ್ನೆಲೆ: ನೀತಿ ಸಂಹಿತೆ ವಿನಾಯ್ತಿಗೆ ಮೈಸೂರು ಜಿಲ್ಲಾಧಿಕಾರಿ ಮನವಿ
ದಸರಾ ಉತ್ಸವದ ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಮೈಸೂರು: ದಸರಾ ಉತ್ಸವದ ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಮೈಸೂರು ಜಿಲ್ಲೆಯ ಇತರೆಡೆ ಚುನಾವಣಾ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಅನರ್ಹ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪ ಚುನಾವಣೆ ಘೋಷಣೆಯಾಗಿದ್ದು, ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಪೂರ್ಣ ಜಿಲ್ಲೆಗೆ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಮಹತ್ವವುಳ್ಳ ದಸರಾ ಹಬ್ಬದ ಹಿನ್ನೆಲೆಯಲ್ಲಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು,ಪ್ರಸ್ತುತ ಯಾವುದೇ ಸಚಿವರು ಇಲ್ಲವೇ ಜನಪ್ರತಿನಿಧಿಗಳು ಅಧಿಕೃತ ಸಭೆಗಳನ್ನು ನಡೆಸಲು ಅವಕಾಶವಿಲ್ಲ.ಅವರು ಜಿಲ್ಲೆಯಲ್ಲಿ ಕಚೇರಿಯ ವಾಹನಗಳನ್ನು ಕೂಡಾ ಬಳಸುವಂತಿಲ್ಲ.ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.ಆದರೆ,ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


