ಸಂಚಾರಿ ಪೊಲೀಸ್ ಹಲ್ಲೆ ಪ್ರಕರಣ: ಗುಂಪೊಂದರಿಂದ ಮಿನಿ ಟ್ರಕ್ ಚಾಲಕನ ತಾಯಿಗೆ ಬೆದರಿಕೆ
ಹಲಸೂರು ಗೇಟ್ ಸಂಚಾರಿ ಠಾಣೆ ಮುಖ್ಯಪೇದೆಯೊಬ್ಬರಿಂಗ ಹಲ್ಲೆಗೊಳಗಾಗಿದ್ದ ಮಿನಿಟ್ರಕ್ ಚಾಲಕನಿಗೆ ಗುಂಪೊಂದು ಜೀವ ಬೆದರಿಕೆ ಹಾಕಿದೆ ಎಂದು ಸೋಮವಾರ ತಿಳಿದುಬಂದಿದೆ.

ಬೆಂಗಳೂರು: ಹಲಸೂರು ಗೇಟ್ ಸಂಚಾರಿ ಠಾಣೆ ಮುಖ್ಯಪೇದೆಯೊಬ್ಬರಿಂಗ ಹಲ್ಲೆಗೊಳಗಾಗಿದ್ದ ಮಿನಿಟ್ರಕ್ ಚಾಲಕನಿಗೆ ಗುಂಪೊಂದು ಜೀವ ಬೆದರಿಕೆ ಹಾಕಿದೆ ಎಂದು ಸೋಮವಾರ ತಿಳಿದುಬಂದಿದೆ.
ಜರಗನಹಳ್ಳಿಯಲ್ಲಿರುವ ಟ್ರಕ್ ಚಾಲಕ ಸುನೀಲ್ ಮನೆಗೆ ಬಂದಿರುವ ಅಪರಿಚತ ವ್ಯಕ್ತಿಗಳು ಆತನ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಸುನೀಲ್ ತಾಯಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಕೈಗೆ ಸಿಕ್ಕರೆ, ಆತನ ಕೈ-ಕಾಲು ಮುರಿದು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಆತಂಕಗೊಂಡಿರುವ ಸುನೀಲ್ ತಾಯಿ ರತ್ನಮ್ಮ ಅವರು ಕೂಡಲೇ ತಮ್ಮ ಮಗನಿಗೆ ಕರೆ ಮಾಡಿ, ಮನೆಗೆ ಬರದಂತೆ ತಿಳಿಸಿದ್ದಾರೆ. ಅಲ್ಲದೆ, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ದೂರಿನಲ್ಲಿ ಬೆದರಿಕೆ ಹಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ಬಳಿ ಸುನೀಲ್ ಮಿನಿ ಟ್ರಂಕ್ ಚಾಲನೆ ಮಾಡುತ್ತಿದ್ದ. ಈ ವೇಳೆ ವಾಹನವನ್ನು ತಡೆದಿದ್ದ ಸಂಚಾರಿ ಪೊಲೀಸರು ತಪಾಸಣೆ ಮಾಡಿದ್ದರು. ಮುಖ್ಯಪೇದೆ ಮಹಾಸ್ವಾಮಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಟ್ರಕ್ ಚಾಲಕನನ್ನು ಠಾಣೆಗೆ ಕರೆದೊಯ್ಯುತ್ತಿದ್ದರು. ಮಾರ್ಗದ ಮಧ್ಯೆ ಚಾಲಕನ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಇದನ್ನು ಚಾಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


