ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆಗೆ ಷರತ್ತುಬದ್ಧ ಅನುಮತಿ
ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಕಚೇರಿ, ಆವರಣದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಮಾಡುವಂತಿಲ್ಲ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್....

ಬೆಳಗಾವಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಕಚೇರಿ, ಆವರಣದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ಮಾಡುವಂತಿಲ್ಲ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ಅವರು ಸೋಮವಾರ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಗರದ ಆರ.ಟಿ.ಓ ವೃತ್ತದಿಂದ ಚೆನ್ನಮ್ಮ ವೃತ್ತದವರೆಗೂ ಪ್ರತಿಭಟನೆ ಆಯೋಜಿಸಲಾಗಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಷರತ್ತು ಬದ್ಧ ಅನುಮತಿ ನೀಡಲಾಗುತ್ತಿದೆ ಎಂದರು.
ನಾಳೆ ಬೆಳಗ್ಗೆಯಿಂದ ಪ್ರತಿಭಟನಾ ಪಾದಯಾತ್ರೆ ಮುಗಿಯುವವರೆಗೂ ಪೊಲೀಸ್ ಬೀಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಷರತ್ತು ಹಾಕಲಾಗುತ್ತಿದೆ ಎಂದರು.
ಅಲ್ಲದೇ, ಆರ.ಟಿ.ಓ ವೃತ್ತದಿಂದ ಚೆನ್ನಮ್ಮ ವೃತ್ತದವರೆಗಿನ ವಾಹನ ಸಂಚಾರದ ಮಾರ್ಗವನ್ನು ಬದಲಿಸಲಾಗುತ್ತಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


