ಬೆಂಗಳೂರು: ಕೊಲೆ ಆರೋಪಿ ಮೇಲೆ ಪೊಲೀಸ್ ಗುಂಡೇಟು
ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಓರ್ವ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ತಿಲಕ್ ನಗರದ ಅರಸು ಕಾಲೋನಿಯಲ್ಲಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಓರ್ವ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ತಿಲಕ್ ನಗರದ ಅರಸು ಕಾಲೋನಿಯಲ್ಲಿ ನಡೆದಿದೆ.
ಆರೋಪಿ ತಬರೇಜ್ ಬಲಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರು ಈತನನ್ನು ಬಂಧಿಸಲು ಮುಂದಾಗಿದಾಗ ಪೊಲೀಸರ ಮೇಲೆ ಆತ ಹಲ್ಲೆ ಮಾಡಿದ್ದಾನೆ. ಶರಣಾಗಲು ತಿಳಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೂ, ಆತ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಗಾಳಿಯಲ್ಲಿ ಗುಂಡು ಹಾರಿಸಿ ಆತ್ಮ ರಕ್ಷಣೆಗಾಗಿ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಆರೋಪಿ ತಬರೇಜ್ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


