ಅನರ್ಹ ಶಾಸಕರ ಸ್ಪರ್ಧೆ ವಿವಾದ: ಪ್ರತಿಕ್ರಿಯೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ನಕಾರ
ರಾಜ್ಯದ ಅನರ್ಹ ಶಾಸಕರು ಉಪ ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲು ರಾಜ್ಯ ಮುಖ್ಯ ಚುನಾವನಾಧಿಕಾರಿ ಸಂಜೀವ್ ಕುಮಾರ್ ನಿರಾಕರಿಸಿದ್ದಾರೆ.

ಬೆಂಗಳೂರು: ರಾಜ್ಯದ ಅನರ್ಹ ಶಾಸಕರು ಉಪ ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲು ರಾಜ್ಯ ಮುಖ್ಯ ಚುನಾವನಾಧಿಕಾರಿ ಸಂಜೀವ್ ಕುಮಾರ್ ನಿರಾಕರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಹಿಂದೆ ಕೂಡ ತಾವು ಅನರ್ಹರು ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಹೇಳಿಕೆ ನೀಡಿಲ್ಲ. ಕೆಲವು ಪತ್ರಿಕೆಗಳು ಕೆಲವು ರೀತಿಯಲ್ಲಿ ಬಿಂಬಿಸಿವೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಸದ್ಯ ಸ್ಪೀಕರ್ ಆದೇಶ ಚಾಲ್ತಿಯಲ್ಲಿದೆ. ಮುಂದಿನ ನಡೆಯ ಕುರಿತು ತಾವು ಪ್ರತಿಕ್ರಿಯೆ ನೀಡುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹೇಳಿದರು.
ಅನರ್ಹರು ಸ್ಪರ್ಧೆಗೆ ನಾಮಪತ್ರ ಸಲ್ಲಿಸಬಹುದೇ ಎಂಬ ಪ್ರಶ್ನೆಗೆ ಅವರು, ಉಮೇದುವಾರಿಕೆ ಸಲ್ಲಿಸದಂತೆ ಯಾರನ್ನು ತಡೆಯಲಾಗದು. ಆದರೆ, ಅದನ್ನು ಪರಿಶೀಲಿಸಿ, ಪರಿಗಣಿಸುವುದು ಬಿಡುವುದು ನಂತರದ ಪ್ರಶ್ನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


