ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ
ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.
ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಈ ಹಿಂದೆ ಸಂಸದರು ದಲಿತ ಸಮುದಾಯಕ್ಕೆ ಸೇರಿದವರೆಂದು ಗ್ರಾಮದ ಒಳಗೆ ಪ್ರವೇಶಿಸಲು ಗ್ರಾಮಸ್ಥರು ನಿರಾಕರಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಹಲವು ಸ್ವಾಮೀಜಿಗಳು ಸಹ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇಂದು ಗೊಲ್ಲರಹಟ್ಟಿಗೆ ಸಂಸದ ನಾರಾಯಣಸ್ವಾಮಿಯವರನ್ನು ಆಹ್ವಾನಿಸಿ, ಅದ್ಧೂರಿ ಸ್ವಾಗತ ಕಾರ್ಯಕ್ರಮ ನಡೆಸಲಾಯಿತು.
ನಾರಾಯಣ ಸ್ವಾಮಿ ಅವರ ಜೊತೆ ಹಿರಿಯೂರು ಶಾಸಕಿ ಹಾಗೂ ಗೊಲ್ಲ ಸಮುದಾಯದ ನಾಯಕಿ ಪೂರ್ಣಿಮಾ ಇದ್ದರು,
ದ್ವೇಷ ಹುಟ್ಟಿಸುವ ಕೆಲಸ ಆಗುತ್ತಿದೆ. ಈ ಬೆಳವಣಿಗೆ ದೇಶಕ್ಕೆ ಕಂಟಕ. ಹೀಗಾಗಿ ಸ್ವಾಮೀಜಿಗಳ ಬಳಿ ಮಾತನಾಡಿದ್ದೆ. ಸಮಾಜದ ನಡುವೆ ಇಂತಹ ಕಂದಕ ನೋಡಿಕೊಂಡು ಇರುವವರು ನಿಜವಾದ ಅಪರಾಧಿ. ಅಂಥ ಸಮಾಜವನ್ನು ಎಚ್ಚರಿಸುವವನೇ ನಿಜವಾದ ದಾರ್ಶನಿಕ, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ತಿಳಿಸಿದ್ದಾರೆ.
ನಿಜವಾದ ಸ್ವಾಮೀಜಿ. ಈ ಘಟನೆಯಿಂದ ಗೊಲ್ಲ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ಗ್ರಾಮದ ಹಿರಿಯರಿಗೆ ವಂದಿಸುತ್ತೇನೆ. ದೇಶ ಕಟ್ಟಲು ಎಲ್ಲರ ಸಹಕಾರ ಬೇಕು. ಮೋದಿ ಅಥವಾ ಅಮಿತ್ ಶಾ ಮಾತ್ರ ದೇಶ ಕಟ್ಟಿಲ್ಲ ಅಥವಾ ಇಂದಿರಾ ಗಾಂಧಿ ಮಾತ್ರ ದೇಶ ಕಟ್ಟಿಲ್ಲ. ದೇಶದ 120 ಕೋಟಿ ಜನರು ದೇಶ ಕಟ್ಟಲು ಪಾಲುದಾರರು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


