ಕ್ರಿಕೆಟ್ ಬೆಟ್ಟಿಂಗ್; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಜಾಲವನ್ನು ಕೇಂದ್ರೀಯ ಅಪರಾಧ ದಳ (ಸಿಸಿಬಿ) ಪೊಲೀಸರು ಬೇಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಜಾಲವನ್ನು ಕೇಂದ್ರೀಯ ಅಪರಾಧ ದಳ (ಸಿಸಿಬಿ) ಪೊಲೀಸರು ಬೇಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯದ ವೇಳೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲಗಳ ಪ್ರಕಾರ ಬೆಟ್ಟಿಂಗ್ ಕುರಿತು ಸಾರ್ವಜನಿಕರು ನೀಡಿದ್ದ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಪೊಲೀಸರು ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಅಂತೆಯೇ ಬಂಧಿತರಿಂದ ಸುಮಾರು 41 ಲಕ್ಷ ರೂ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ನಗರ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ ಅವರು ಬೆಟ್ಟಿಂಗ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಮಾಹಿತಿ ನೀಡುವಂತೆ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


