ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ
ನಗರದ ಬಾಗಲಗುಂಟೆಯ ಕಿರ್ಲೋಸ್ಕರ್ ಲೇಔಟ್ ನ ಲಾಡ್ಜ್ ವೊಂದರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.21 ವರ್ಷದ ಕಾರ್ತಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಬೆಂಗಳೂರು:ನಗರದ ಬಾಗಲಗುಂಟೆಯ ಕಿರ್ಲೋಸ್ಕರ್ ಲೇಔಟ್ ನ ಲಾಡ್ಜ್ ವೊಂದರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.21 ವರ್ಷದ ಕಾರ್ತಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಓಯೋ ಆ್ಯಪ್ ಮೂಲಕ ಆನ್ ಲೈನ್ ನಲ್ಲಿ ಕಾರ್ತಿಕ್ ರೂಮ್ ಬುಕ್ ಮಾಡಿದ್ದು, ನಿನ್ನೆ ರಾತ್ರಿ ಯುವತಿ ಜೊತೆಗೆ ರೂಮ್ ನಲ್ಲಿ ತಂಗಿದ್ದನು.ಈ ಇಬ್ಬರೂ ಹರ್ಬಲ್ ಲೈಫ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯುವಕನ ಪೋಷಕರನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಠಡಿಯಲ್ಲಿದ್ದ ಯುವತಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


