ರಾಜ್ಯ

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿಯೇ ನಡೆಯಲಿ: ಸಿದ್ದರಾಮಯ್ಯ

ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಮಾಡುವ ಬದಲಾಗಿ ಬೆಳಗಾವಿಯ. ಸುವರ್ಣ ಸೌಧದಲ್ಲಿ ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿಯೇ ನಡೆಯಲಿ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಮಾಡುವ ಬದಲಾಗಿ ಬೆಳಗಾವಿಯ. ಸುವರ್ಣ ಸೌಧದಲ್ಲಿ ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದಲೇ ನಿರ್ಮಿಸಿರುವ ಬೆಳಗಾವಿಯ ಸುವರ್ಣಸೌಧದ ಬದಲಾಗಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಬೇಕೆಂದು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಸರಿಯಲ್ಲ. ಬೆಳಗಾವಿಯಲ್ಲೇ ಅಧಿವೇಶನ ನಡೆಸುವುದರಿಂದ ನೆರೆ ಪರಿಹಾರ ಕಾರ್ಯಗಳು ಸಹ ಚುರುಕಾಗುತ್ತವೆ ಎಂದು ಸಲಹೆ ನೀಡಿದ್ದಾರೆ,

ಉಪಚುನಾವಣೆಯು ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಮುಂದಕ್ಕೆ ಹೋಗಿರುವ ಕಾರಣ ಅಧಿವೇಶನವನ್ನು ನಿಗದಿಯಂತೆ ಬೆಳಗಾವಿಯಲ್ಲೇ ನಡೆಸಿರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಾರ್ಯಗಳು ಚುರುಕಾಗಿ ಆಗುತ್ತಿಲ್ಲ ಇಂತಹಾ ಸಂದರ್ಭದಲ್ಲಿ ಬೆಳಗಾವಿಯ ಬದಲು ಬೆಂಗಳೂರಲ್ಲಿ ಸಮಾವೇಶ ನಡೆಸುವುದು ಸೂಕ್ತವಲ್ಲ. ಬೆಳಗಾವಿಯಲ್ಲೇ ಸಮಾವೇಶ ನಡೆದರೆ ಪರಿಹಾರ ಕಾರ್ಯಕ್ಕೆ ಚುರುಕು ನೀಡಿದಂತಾಗುತ್ತದೆ ಮತ್ತು ಸಂತ್ರಸ್ತರಲ್ಲೂ ಆಶಾಭಾವನೆ ಚಿಗುರುತ್ತದೆ ಎಂದರು.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿಯೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಸಂಪ್ರದಾಯ ಪಾಲಿಸಿಕೊಂಡು ಬರಲಾಗುತ್ತಿದೆ. ಈ ಸಂಪ್ರದಾಯವನ್ನು ಮುರಿಯುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.