ರಾಜ್ಯ

ರಾಯಚೂರು: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ತಗುಲಿ 6ನೇ ತರಗತಿ ವಿದ್ಯಾರ್ಥಿ ಸಾವು

ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊರ್ವ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಬಸಾಪುರ‌ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ರಾಯಚೂರು: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ತಗುಲಿ 6ನೇ ತರಗತಿ ವಿದ್ಯಾರ್ಥಿ ಸಾವು
ಸಾಂದರ್ಭಿಕ ಚಿತ್ರ
Published On :

ರಾಯಚೂರು: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊರ್ವ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಬಸಾಪುರ‌ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

6ನೇ ತರಗತಿ ವಿದ್ಯಾರ್ಥಿ ಅನಿಲ್ ಕುಮಾರ್ ತಿಮ್ಮಪ್ಪ ಮೃತ ವಿದ್ಯಾರ್ಥಿ. ಭೀಕರ ಮಳೆಯಿಂದಾಗಿ ಶಾಲೆಯ ಮೇಲ್ಛಾವಣಿ ಮೇಲೆ ಸಂಗ್ರಹವಾಗಿದ್ದ ನೀರು ಹೊರಹಾಕಲು ತೆರಳಿದ್ದ ವೇಳೆ ಆಯತಪ್ಪಿ ಆತನಿಗೆ  ವಿದ್ಯುತ್ ತಗುಲಿದೆ. 

ವಿದ್ಯುತ್ ಆಘಾತದಿಂದ ಅಸ್ವಸ್ಥವಾಗಿದ್ದ ಆತನನ್ನು ತಕ್ಷಣವೇ ಕವಿತಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಶಿಕ್ಷಕರು ಶಾಲೆಗೆ ಬರುವ ಮುನ್ನವೇ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಯ  ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.   
ಘಟನೆಗೆ  ಸಂಬಂಧಿಸಿದಂತೆ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.