ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಬಿ.ಎಸ್. ಯಡಿಯೂರಪ್ಪ
ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಬೆಂಗಳೂರು: ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ವಿಚಾರವಾಗಿ ಸಂಸದ ಪ್ರಹ್ಲಾದ್ ಜೋಷಿ ತಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದರು.
ಚುನಾವಣಾ ಆಯೋಗ 15 ಕ್ಷೇತ್ರಗಳ ಉಪಚುನಾವಣೆಗೆ ಮತ್ತೆ ದಿನಾಂಕ ಘೋಷಣೆ ಮಾಡಿದೆ. ಚುನಾವಣೆ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚಿಸಲಾಗುತ್ತಿದೆ. ಪಕ್ಷ ಚುನಾವಣೆ ಎದುರಿಸಲು ಸಿದ್ಧವಿದೆ ಎಂದು ತಿಳಿಸಿದರು.
ಅಕ್ಟೋಬರ್ 3 ರಂದು ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ವಿಜಯನಗರ ಜಿಲ್ಲಾ ರಚನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. ಬಳ್ಳಾರಿ ಜಿಲ್ಲೆ ವಿಭಜನೆ ಸಂಬಂಧ ಜಿಲ್ಲೆಯ ಪಕ್ಷದ ನಾಯಕರನ್ನೆಲ್ಲ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


