ರಾಜ್ಯ

6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಚಿಂತನೆ

10ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಪಾಸ್‌ ಮಾಡುವ ಪದ್ಧತಿಯನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಚಿಂತನೆ
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: 10ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಪಾಸ್‌ ಮಾಡುವ ಪದ್ಧತಿಯನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, 6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆಯ ಅನುಭವವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆಯಲ್ಲಿ ಬದಲಾವಣೆ ತರಲು ಚಿಂತಿಸಲಾಗುತ್ತಿದೆ. ಎಂದರು.

1ನೇ ತರಗತಿಯಿಂದ 10ನೇ ತರಗತಿಯವರೆಗೆ ಮಕ್ಕಳು ಯಾವುದೇ ಪರೀಕ್ಷೆ ಎದುರಿಸದೇ, ನೇರವಾಗಿ 10ನೇ ತರಗತಿಗೆ ಬಂದು ಪರೀಕ್ಷೆ ಬರೆಯವುದರಿಂದ ಭಯದಿಂದಾಗಿ ಮಕ್ಕಳು ಫೇಲ್ ಆಗುವ ಸಾಧ್ಯತೆಗಳು ಹೆಚ್ಚಿರುತ್ತದೆ. ವಿದ್ಯಾರ್ಥಿಗಳನ್ನು ಫೇಲ್ ಮಾಡುವ ಉದ್ದೇಶ ಇದಲ್ಲ. ಆದರೆ ಅವರಿಗೆ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸುವ ಆತ್ಮವಿಶ್ವಾಸ ಹುಟ್ಟಲಿ ಎಂಬ ಕಾರಣಕ್ಕೆ ಈ ಚಿಂತನೆ ನಡೆದಿದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಯಾವುದೇ ಇರಲಿ ಎಲ್ಲಾ ಶಾಲಾಮಕ್ಕಳಿಗೂ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು. ಅಲ್ಲದೆ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಬಿಸಿ ಊಟವನ್ನು ವಿಸ್ತರಿಸುವ ಚಿಂತನೆ ನಡೆದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.