ವಿವಾದಕ್ಕೆ ಎಡೆಮಾಡಿದ ಮಹಿಷ ದಸರಾ; ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ರದ್ದು
ಪ್ರಗತಿಪರ, ದಲಿತ ಸಂಘಟನೆಗಳು ಮತ್ತು ಬುದ್ದಿಜೀವಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲುದ್ದೇಶಿಸಿದ್ದ ಮಹಿಷ ದಸರಾ ತೀವ್ರ ವಿವಾದಕ್ಕೆ ಕಾರಣವಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಮತ್ತು ಟೌನ್ ಹಾಲ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದೆ.

ಮೈಸೂರು: ಪ್ರಗತಿಪರ, ದಲಿತ ಸಂಘಟನೆಗಳು ಮತ್ತು ಬುದ್ದಿಜೀವಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಚರಿಸಲುದ್ದೇಶಿಸಿದ್ದ ಮಹಿಷ ದಸರಾ ತೀವ್ರ ವಿವಾದಕ್ಕೆ ಕಾರಣವಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಮತ್ತು ಟೌನ್ ಹಾಲ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಲ್ಲಿ ಕಾರ್ಯಕ್ರಮ ರದ್ದುಮಾಡಿದೆ.
ಇದರಿಂದಾಗಿ ಮೈಸೂರು ದಸರಾ ಆಯೋಜಕರು ಕಾರ್ಯಕ್ರಮ ಸ್ಥಳವನ್ನು ಅಶೋಕಪುರದ ಅಂಬೇಡ್ಕರ್ ಪಾರ್ಕ್ ಗೆ ವರ್ಗಾಯಿಸಲಾಗಿದ್ದು ಇಲ್ಲಿ ಸಾಹಿತಿಗಳು ಮತ್ತು ಇತರರಿಗೆ ಮಹಿಷಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಯೋಜನೆಗೆ ವಿರೋಧ ವ್ಯಕ್ತವಾದಾಗ ಸಂಘಟಕರು ಪ್ರತಿಭಟನೆ ನಡೆಸಿ ಬಿಜೆಪಿ ನೇತೃತ್ವದ ಸರ್ಕಾರ ತನ್ನಿಷ್ಟದಂತೆ ವರ್ತಿಸುತ್ತಿದ್ದು ಜನರ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡುತ್ತಿದೆ. ಸರ್ಕಾರ ದ್ರಾವಿಡ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ನಡೆದುಕೊಳ್ಳುತ್ತಿದೆ, ಅದರ ಪ್ರಕಾರ ಚಾಮುಂಡಿ ಬೆಟ್ಟ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸ್ಥಳೀಯರು ಮಹಿಷ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


