ಬೆಂಗಳೂರು: ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿದ್ದವನಿಗೆ ಗೂಸಾ
ಯುವತಿ ಜೊತೆಗಿನ ಖಾಸಗಿ ದೃಶ್ಯವನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನಿಗೆ ಗೂಸಾ ನೀಡಿರುವ ಘಟನೆ ನಗರದ ರಾಮಮೂರ್ತಿನಗರದಲ್ಲಿ ಶನಿವಾರ ನಡೆದಿದೆ.

ಬೆಂಗಳೂರು: ಯುವತಿ ಜೊತೆಗಿನ ಖಾಸಗಿ ದೃಶ್ಯವನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನಿಗೆ ಗೂಸಾ ನೀಡಿರುವ ಘಟನೆ ನಗರದ ರಾಮಮೂರ್ತಿನಗರದಲ್ಲಿ ಶನಿವಾರ ನಡೆದಿದೆ.
ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಸುನೀಲ್ ತನ್ನ ಮನೆಗೆ ಯುವತಿಯನ್ನು ಕರೆಸಿಕೊಂಡು ಈ ಕೃತ್ಯವೆಸಗಿ, ಮೊಬೈಲ್ ನಲ್ಲಿ ದೃಶ್ಯ ಸೆರೆಹಿಡಿದ್ದನು . ನಂತರ ವಿಡಿಯೋ ತೋರಿಸಿ ಆಕೆಗೆ ಪದೇ ಪದೇ ಕಿರುಕುಳ ಕೊಡುತ್ತಿದ್ದನು. ಸುನೀಲ್ ಕಿರುಕುಳಕ್ಕೆ ಬೇಸತ್ತ ನೊಂದ ಯುವತಿ ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ವೇದಿಕೆಗೆ ವಿಷಯ ತಿಳಿಸಿದ್ದಳು.
ನಂತರ ಸಂಘಟನೆಯ ಸದಸ್ಯರು ಆರೋಪಿ ಸುನೀಲ್ ಮನೆಗೆ ನುಗ್ಗಿ ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


