ರಾಜ್ಯ

ದಸರಾ ಉತ್ಸವ; ಕೇಂದ್ರ ಸಚಿವ ಸದಾನಂದಗೌಡರನ್ನು ತಡೆದ ಭದ್ರತಾ ಸಿಬ್ಬಂದಿ

ಮೈಸೂರಿನ ಜಗತ್ ವಿಖ್ಯಾತ ದಸರಾ ಉತ್ಸವಕ್ಕೆ ಆಗಮಿಸಿದ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಮುಜುಗರಕ್ಕೀಡಾಗುವ ಸನ್ನಿವೇಶ ಎದುರಾಯಿತು.

ದಸರಾ ಉತ್ಸವ; ಕೇಂದ್ರ ಸಚಿವ ಸದಾನಂದಗೌಡರನ್ನು ತಡೆದ ಭದ್ರತಾ ಸಿಬ್ಬಂದಿ
ಸದಾನಂದಗೌಡ
Published On :

ಮೈಸೂರು: ಮೈಸೂರಿನ ಜಗತ್ ವಿಖ್ಯಾತ ದಸರಾ ಉತ್ಸವಕ್ಕೆ ಆಗಮಿಸಿದ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಮುಜುಗರಕ್ಕೀಡಾಗುವ ಸನ್ನಿವೇಶ ಎದುರಾಯಿತು.

ಭಾನುವಾರ ಉದ್ಘಾಟನಾ ಕಾರ್ಯಕ್ರಮಕ್ಕೆ ಸದಾನಂದಗೌಡ ಅವರು ಸ್ವಲ್ಪ ತಡವಾಗಿ ಆಗಮಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಲೇ ವೇದಿಕೆಯಲ್ಲಿದ್ದರು. ಆದ್ದರಿಂದ ತರಾತುರಿಯಲ್ಲಿ ವೇದಿಕೆಯತ್ತ ಸಾಗುತ್ತಿದ್ದ ಸಚಿವರನ್ನು ಭದ್ರತಾ ಸಿಬ್ಬಂದಿ ತಡೆದು ನಿಲ್ಲಿಸಿದರು. ಇದು ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ನಂತರ, ಪೊಲೀಸ್ ಅಧಿಕಾರಿಗಳು ಅವರನ್ನು ಗಮನಿಸಿ ವೇದಿಕೆಗೆ ಕರೆದೊಯ್ದರಾದರೂ, ಘಟನೆಯಿಂದ ಬೇಸರಗೊಂಡ ಸದಾನಂದ ಗೌಡ ಅವರು ಕಾರ್ಯಕ್ರಮದ ಮಧ್ಯದಲ್ಲೇ ತೆರಳಿದರು ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರು ದಸರಾ ಉತ್ಸವವನ್ನು ಉದ್ಘಾಟಿಸಿದರು.

ಮುಂದಿನ ಒಂಬತ್ತು ದಿನಗಳ ಕಾಲ ನಡೆಯಲಿರುವ ವಿಜೃಂಬಣೆಯ ಜಂಬೂ ಸವಾರಿ ವಿಜಯದಶಮಿಯಂದು ಕೊನೆಗೊಳ್ಳಲಿದ್ದು, ಇದಕ್ಕೆ ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.