ನೇತ್ರಾವತಿ ನದಿಗೆ ಹಾರಿದ ತಾಯಿ, ಮಕ್ಕಳು: ಮನೆಯೊಡತಿಯನ್ನು ರಕ್ಷಿಸಿಲು ಯತ್ನಿಸಿದ ಸಾಕು ನಾಯಿ
ಕಳೆದ ರಾತ್ರಿ ಇಲ್ಲಿನ ನೇತ್ರಾವತಿ ನದಿಗೆ ಹಾರಿದ ಮೂವರ ಗುರುತು ಪತ್ತೆಯಾಗಿದ್ದು, ಮೈಸೂರು ಮೂಲದ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಕಳೆದ ರಾತ್ರಿ ಇಲ್ಲಿನ ನೇತ್ರಾವತಿ ನದಿಗೆ ಹಾರಿದ ಮೂವರ ಗುರುತು ಪತ್ತೆಯಾಗಿದ್ದು, ಮೈಸೂರು ಮೂಲದ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ವಿಜಯನಗರ ನಾಲ್ಕನೇ ಹಂತದ ನಿವಾಸಿಗಳಾದ ಕವಿತಾ (57) ಅವರ ಪುತ್ರ ಕೌಶಿಕ (29) ಹಾಗೂ ಪುತ್ರಿ ಕಲ್ಪನಾ (27) ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೊದಲು ದಂಪತಿ ಮಗುವಿನೊಂದಿಗೆ ನದಿಗೆ ಹಾರಿರಬಹುದು ಎಂದು ಶಂಕಿಸಲಾಗಿತ್ತು. ನದಿಗೆ ಹಾರಿದ್ದನ್ನು ನೇರವಾಗಿ ಯಾರೂ ನೋಡಿರಲಿಲ್ಲ. ಆದರೆ, ದೂರದಲ್ಲಿದ್ದ ಸ್ಥಳೀಯರಿಗೆ ಶಬ್ದ ಕೇಳಿದ್ದು, ಅವರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಅವರ ಸಾಕು ನಾಯಿ ಹಾಗೂ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದರಾದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


