ಫೋನ್ ಟ್ಯಾಪಿಂಗ್: ಸ್ವಾಮಿಗಳ ಬಗೆಗೆ ಅನುಮಾನ ಪಟ್ಟಿಲ್ಲ, ವರದಿಯಿಂದ ನೋವಾಗಿದೆ- ಕುಮಾರಸ್ವಾಮಿ
ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ಕುರಿತ ವರದಿಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದ್ದರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ್ದರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಸಚಿವ ಅಶೋಕ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಟ್ವೀಟ್ ನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


