ಬಂಡೀಪುರ ರಾತ್ರಿ ಸಂಚಾರ ನಿಷೇಧರಿಂದ ಕೇರಳ, ಕರ್ನಾಟಕ ಜನರಿಗೆ ಸಂಕಷ್ಟ: ರಾಹುಲ್ ಗಾಂಧಿ
ಬಂಡೀಪುರ ಮೀಸಲು ಅರಣ್ಯ ವ್ಯಾಪ್ತಿಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ತೊಂದರೆ ಉಂಟುಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಬಂಡೀಪುರ ಮೀಸಲು ಅರಣ್ಯ ವ್ಯಾಪ್ತಿಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ತೊಂದರೆ ಉಂಟುಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.ಹಾಗೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಥಳೀಯ ಜನಸಮುದಾಯದ ಹಿತಾಸಕ್ತಿಯನ್ನು ಕಾಪಾಡುವತ್ತ ಗಮನಿಸಬೇಕೆಂದು ಮನವಿ ಮಾಡಿದ್ದಾರೆ.
ಹುಲಿ ಮೀಸಲು ಅರಣ್ಯದ ಮೂಲಕ ಹಾದು ಹೋಗುವ ಹೆದ್ದಾರಿ ಸಂಚಾರವನ್ನು ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ನಿಷೇಧಿಸಲಾಗಿದೆ.
ಮೀಸಲು ಅರಣ್ಯದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ ವನ್ಯಜೀವಿಗಳಿಗೆ ತೊಂದರೆ ಕಡಿಮೆಗೊಳಿಸುವ ಉದ್ದೇಶ ಹೊಂದಿದೆ.ಕೇರಳದ ವಯನಾಡು ಸಂಸದರಾಗಿರುವ ರಾಹುಲ್ ಗಾಂಧಿ ರಾಷ್ಟ್ರೀಯ ಹೆದ್ದಾರಿ ರಾತ್ರಿ ಸಂಚಾರ ನಿಷೇಧ ಖಂಡಿಸಿ ಸೆಪ್ಟೆಂಬರ್ 25 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿರುವ ಯುವಕರಿಗೆ ಬೆಂಬಲ ಸೂಚಿಸಿದ್ದಾರೆ.
"ಸೆಪ್ಟೆಂಬರ್ 25 ರಿಂದ ಎನ್‌ಎಚ್ -766ರಲ್ಲಿ 9 ಗಂಟೆಗಳ ಸಂಚಾರ ನಿಷೇಧವನ್ನು ವಿರೋಧಿಸಿ ನಡೆಸುತ್ತಿರುವ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ನಾನು ಯುವಕರೊಂದಿಗೆ ನಿಲ್ಲುತ್ತೇನೆ.ಇದು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ಅಪಾರ ತೊಂದರೆಗಳನ್ನುಂಟು ಮಾಡಿದೆ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಟ್ವೀಟ್ ಮೂಲಕ ಹೇಳಿದ್ದಾರೆ.
"ನಮ್ಮ ಪರಿಸರವನ್ನು ರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ಎತ್ತಿಹಿಡಿಯುವುದರೊಂದಿಗೆ ಸ್ಥಳೀಯ ಜನಸಮುದಾಯಗಳ ಹಿತಾಸಕ್ತಿಗಳನ್ನು ಕಾಪಾಡುವಂತೆ ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದ ವಯನಾಡ್ ಮತ್ತು ಕರ್ನಾಟಕದ ಮೈಸೂರನ್ನು ಸಂಪರ್ಕಿಸುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ ಹೆದ್ದಾರಿಯನ್ನು ರಾತ್ರಿ ಸಂಚಾರಕ್ಕೆ ಅನುವು ಮಾಡಬೇಕೆಂದು ಕೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


