ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ, ಪತಿ ಮೇಲೆ ಕೊಲೆ ಶಂಕೆ
ಮನೆಯೊಂದರಲ್ಲಿ ವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಬೇಗೂರು ಬಳಿ ನಡೆದಿದೆ.

ಬೆಂಗಳೂರು: ಮನೆಯೊಂದರಲ್ಲಿ ವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಬೇಗೂರು ಬಳಿ ನಡೆದಿದೆ.
ಚಾಮುಂಡೇಶ್ವರಿ ನಗರದ ನಂದಿನಿ ಮೃತ ದುರ್ದೈವಿ. ಇವರು 10 ವರ್ಷಗಳ ಹಿಂದೆ ಮಧು ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಪತಿ ಮಧು, ನಂದಿನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಶವ ಬಿಟ್ಟು ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪೋಷಕರು ಹಲವು ಬಾರಿ ನಂದಿನಿಗೆ ಕರೆ ಮಾಡಿದ್ದಾರೆ. ಆದರೆ, ಮನೆಯಲ್ಲಿ ಯಾರು ಕರೆ ಸ್ವೀಕರಿಸಿಲ್ಲ. ಇದರಿಂದ ಗಾಬರಿಗೊಂಡು ಪೋಷಕರು ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಬೇಗೂರು ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಳ ಪತಿ ಮಧುವಿಗಾಗಿ ಶೋಧ ಕಾರ್ಯ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


