ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಎರಡು ಯುವಕರ ಗುಂಪುಗಳ ಮಾರಾಮಾರಿ
ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ.

ಮೈಸೂರು: ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ.
ಪಾನಮತ್ತರಾಗಿದ್ದ 10 ಯುವಕರ ತಂಡ ಇಬ್ಬರು ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಲ್ಲದೆ, ಎರಡು ಬೈಕ್ಗಳನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ಭಾನುವಾರ ರಾತ್ರಿ 9 ಗಂಟೆಯಲ್ಲಿ ಈ ಹೊಡೆದಾಟ ನಡೆದಿದ್ದು, ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು ಎನ್ನಲಾಗಿದೆ.
ನಡುರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡುವ 10 ಯುವಕರ ತಂಡ ಮನಸೋಇಚ್ಛೆ ಥಳಿಸಿದೆ. ಅಂದಾಜು ಅರ್ಧ ಗಂಟೆಗೂ ಹೆಚ್ಚುಕಾಲ ಹಲ್ಲೆ ನಡೆಸಲಾಗಿದೆ. ಗಲಾಟೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಲ್ಲೆ ಮಾಡುತ್ತಿದ್ದ ತಂಡದ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ಕೆ.ಆರ್.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


