ಮಂಗಳೂರು ಗೋಲಿಬಾರ್ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಯಡಿಯೂರಪ್ಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜ್ಯ ರಾಜಧಾನಿಯಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸರ ಗೋಲಿಬಾರ್ ಪ್ರಕರಣವನ್ನು ಸಿಐಡಿ ಪೊಲೀಸರಿಗೆ ನೀಡಿದ್ದಾರೆ. ಇನ್ನು ಇದನ್ನು ನ್ಯಾಯಾಂಗ ವ್ಯವಸ್ಥೆಗೂ ವಹಿಸಲಾಗಿತ್ತು. ಈ ಕುರಿತು ಮ್ಯಾಜಿಸ್ಟೇಟರ್ ಕೂಡ ತನಿಖೆ ಮುಂದುವರೆಸಲಿದ್ದಾರೆ ಎಂದರು.
ಇನ್ನು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿ ಹಲವೆಡೆ ಇಂದು ಸಹ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಇರುವುದರಿಂದ ಬಿಗಿ ಭದ್ರತೆ ವಹಿಸುವಂತೆ ಸಿಎಂ ಸೂಚಿಸಿದ್ದಾರೆ.
ಮಂಗಳೂರಿನಲ್ಲಿ ಈಗಾಗಲೇ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಿನ್ನೆ ಮಂಗಳೂರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದು, ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವುದೇ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ತೊಂದರೆಯಿಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೂ ಕೂಡ ಕಾಂಗ್ರೆಸ್ ತನ್ನ ಲಾಭಕ್ಕಾಗಿ ಈ ಪ್ರತಿಭಟನೆಗೆ ಮುಂದಾಗಿದೆ. ಈ ಘಟನೆಗೆಲ್ಲಾ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಇನ್ನೊಂದು ವಾರ ಕಳೆದ ನಂತರ ದೆಹಲಿಗೆ ಹೋಗುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು. ಅವರು ಇಂದು ದೆಹಲಿಗೆ ಹೋಗುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಪ್ರತಿಭಟನೆ ಹಿನ್ನಲೆಯಲ್ಲಿ ಮುಂದೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


