ಕೊವಿಡ್ -19: ಮುಖ್ಯಮಂತ್ರಿ ಪರಿಹಾರ ನಿಧಿಗೆ 1. 25 ಲಕ್ಷ ರೂ. ದೇಣಿಗ ನೀಡಿದ ನಿವೃತ್ತ ಶಿಕ್ಷಕಿ
ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯೂ ಆಗಿರುವ ಜಿ.ಜಯಲಕ್ಷಮ್ಮ ಅವರು ತಮ್ಮ ಪಿಂಚಣಿ ನಿಧಿಯಲ್ಲಿ ಉಳಿತಾಯ ಮಾಡಿದ್ದ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿ, ಮಾನವೀಯತೆ ಮರೆದಿದ್ದಾರೆ.
ಮಲ್ಲೇಶ್ವರಂ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಜಿ.ಜಯಲಕ್ಷಮ್ಮ ಅವರು 1992ನೇ ಸಾಲಿನ ಅಕ್ಟೋಬರ್ ನಲ್ಲಿ ನಿವೃತ್ತಿ ಹೊಂದಿದರು. ಸತತ ಮೂವತ್ತು ವರ್ಷಗಳ ಕಾಲ ಅವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅಂದಿನಿಂದ ಪಿಂಚಣಿಯಲ್ಲಿ ಉಳಿತಾಯ ಮಾಡಿದ್ದ ಹಣವನ್ನು ದೇಣಿಗೆ ನೀಡಿದ್ದಾರೆ.
ಇಡೀ ವಿಶ್ವವನ್ನೇ ಕೊರೋನಾ ವೈರಸ್ ಆವರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕೋವಿಡ್-19 ಸೋಂಕು ವಿರುದ್ಧ ಹೋರಾಡುತ್ತಿದ್ದಾರೆ. ಮಾರಣಾಂತಿಕ ವೈರಸ್ ವಿರುದ್ಧ ಜಾಗೃತರಾಗಿ ಹಾಗೂ ಆರೋಗ್ಯ ಸಂಸ್ಥೆಗಳು ನೀಡಿರುವ ಸೂಚನೆಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಕೂಡ ನಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾಗಿದ್ದೇವೆ ಎಂದು ಜಿ.ಜಯಲಕ್ಷಮ್ಮ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


