ಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮ- ಬಿ.ಶ್ರೀರಾಮುಲು
ಮನೆ ಬಾಗಿಲಿಗೆ ಬಂದು ಕೋವಿ ಡ್-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್

ಬೆಂಗಳೂರು: ಮನೆ ಬಾಗಿಲಿಗೆ ಬಂದು ಕೋವಿ ಡ್-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.
ಸರಾಯಿ ಪಾಳ್ಯದ ಸಾಧಿಕ್ ಪಾಳ್ಯದಲ್ಲಿ ಆಶಾ ಕಾರ್ಯಕರ್ತರು ಆರೋಗ್ಯ ಸಮೀಕ್ಷೆ ನಡೆಸಲು ತೆರಳಿದ್ದಾಗ ಸ್ಥಳೀಯರು ಅವರ ಮೇಲೆ ಹಲ್ಲೆಗೆ ಯತ್ನಿಸಿ ಅವರ ಮೊಬೈಲ್ ಕಿತ್ತುಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


