ದಿಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಬೆಳಗಾವಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ- ಲಕ್ಷ್ಮಣ ಸವದಿ
ದೆಹಲಿಯ ನಿಜಾಮುದ್ದೀನ್ ಮರ್ಜಕ್‍ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿ ಜಿಲ್ಲೆಗೆ 62 ಜನ ಬಂದಿದ್ದಾರೆ. 62 ಜನರ ಪೈಕಿ 32 ಜನರ ಗಂಟಲು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿ: ದೆಹಲಿಯ ನಿಜಾಮುದ್ದೀನ್ ಮರ್ಜಕ್‍ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿ ಜಿಲ್ಲೆಗೆ 62 ಜನ ಬಂದಿದ್ದಾರೆ. 62 ಜನರ ಪೈಕಿ 32 ಜನರ ಗಂಟಲು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೆಹಲಿಯ ನಿಜಾಮುದ್ದೀನ್ ಮರ್ಕಜ್‍ನಲ್ಲಿ ನಡೆದ ಧಾರ್ಮಿಕ ಸಭೆಯಿಂದ ಜಿಲ್ಲೆಗೆ ಆಗಮಿಸಿದವರ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಇದುವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಕೇಸ್ ಸಿಕ್ಕಿಲ್ಲ. ಕೊರೋನಾ ತಡೆಗೆ ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಒಂದೇ ಮದ್ದು ಎಂದು ಹೇಳಿದರು.
ಕೊರೋನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯ ಸಾಮಗ್ರಿ ಪೂರೈಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ನ್ಯಾಯಬೆಲೆ ಅಂಗಡಿಗಳಿಗೆ ವಾಹನ ಕೊಟ್ಟು ಮನೆಮನೆಗೆ ಪಡಿತರ ವಿತರಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


