ಐಕ್ಯತೆ ಪ್ರದರ್ಶನ ಓಕೆ, ಜೊತೆಗೆ ಕೊರೋನಾ ಸೋಂಕು ಪರೀಕ್ಷಾ ಕಿಟ್‌ಗಳನ್ನು ಹೆಚ್ಚೆಚ್ಚು ಒದಗಿಸಿ: ಮಾಜಿ ಪ್ರಧಾನಿ ದೇವೇಗೌಡ
ಇದೇ 5ರಂದು ರಾತ್ರಿ ದೀಪ ಆರಿಸಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಐಕ್ಯತೆ ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ವಾಗತಿಸಿದ್ದಾರೆ.

ಬೆಂಗಳೂರು: ಇದೇ 5ರಂದು ರಾತ್ರಿ ದೀಪ ಆರಿಸಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಐಕ್ಯತೆ ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ವಾಗತಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡ, ಆರೋಗ್ಯ ಕಾರ್ಯಕರ್ತರ ಬಗ್ಗೆ ಐಕ್ಯತೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಲು ಜನರಿಗೆ ಪ್ರೇರಣೆ ನೀಡಲು ಪ್ರಧಾನಿಯವರ ಆಲೋಚನೆಯನ್ನು ನಾನು ಸ್ವಾಗತಿಸುತ್ತೇನೆ. ಇದರ ಜೊತೆಗೆ ಕೋವಿಡ್ 19 ಸೋಂಕು ಪರೀಕ್ಷಿಸುವ ಕಿಟ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಒದಗಿಸುವ ಅವಶ್ಯಕತೆ ಇದೆ. ಈ ರೀತಿ ಹೆಚ್ಚಿನ ಕಿಟ್‌ಗಳನ್ನು ಒದಗಿಸಿದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಜನದಟ್ಟಣೆಯನ್ನು ಕಡಿಮೆ ಮಾಡಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ದಿನದ ಕೂಲಿಗಾಗಿ ಕೆಲಸ ಮಾಡುವ ದಿನಗೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದವರ ಉಳಿತಾಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕೆಲವರು ತಮ್ಮ ಉಳಿವಿಗಾಗಿ ಅಗತ್ಯವಾದ ವಸ್ತುಗಳನ್ನು ಸಹ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಬಗ್ಗೆ ತಾವು ಅತ್ಯಂತ ತುರ್ತಾಗಿ ಕ್ರಮಕೈಗೊಳ್ಳಬೇಕು ಎಂದು ದೇವೇಗೌಡ ಹೇಳಿದ್ದಾರೆ.
ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ಕೃಷಿ ಉತ್ಪನ್ನಗಳಿಗೆ, ವಿಶೇಷವಾಗಿ ಬೇಗನೆ ನಶಿಸಬಹುದಾದ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿ ಇಲ್ಲದಂತೆ ನೋಡಿಕೊಳ್ಳಬೇಕು. ಆಗ ಮಾತ್ರ ನಾವು ಈ ಸಾಂಕ್ರಾಮಿಕ ರೋಗದ ವಿರುದ್ಧ ನಮ್ಮ ಸುದೀರ್ಘ ಯುದ್ಧವನ್ನು ಮಾಡಬಹುದು ಎಂದು ಅವರು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


